Sat,Apr20,2024
ಕನ್ನಡ / English

ತುರ್ತಾಗಿ ಸಹಾಯಹಸ್ತ ಬೇಕೆ ಹೊರತು ಉಪದೇಶದ ಬುರುಡೆ ಮಾತಲ್ಲ | ಜನತಾ ನ್ಯೂಸ್

21 Apr 2021
1281

ಬೆಂಗಳೂರು : ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮೋದಿ ಭಾಷಣದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಗಳನ್ನ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ.

ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ.

ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕವಿಲ್ಲದೆ, ಐಸಿಯು ಹಾಸಿಗಳಿಲ್ಲದೇ, ಪ್ರಾಣ ರಕ್ಷಕ ಔಷಧ ರೆಮ್ ಡೆಸಿವಿರ್ ಸಿಗದೇ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ನರೇಂದ್ರ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊರೋನಾ ಕಾರಣದಿಂದಾಗಿ ಲಾಕ್ ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಬಿಜೆಪಿ ಸರ್ಕಾರ ಮಾತನಾಡುತ್ತಿದೆ. ಲಾಕ್ಡೌನ್ ಹೇರಿದರೆ ಕಷ್ಟ-ನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ನಿಮ್ಮ ತಲೆ ಮೇಲೆ ನಿಮ್ಮ ಕೈ ಎಂಬ ಸಂದೇಶ ನೀಡಿದೆ ಎಂದು ಹೇಳಿದ್ದಾರೆ.

ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ ಸರ್ಕಾರವೂ ಕಾರಣ.

ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ , ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

RELATED TOPICS:
English summary :Siddaramaiah

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...