Thu,Apr25,2024
ಕನ್ನಡ / English

14 ದಿನ ಮಾರ್ಗಸೂಚಿ ಪಾಲನೆಯಿಂದ ಕೊರೋನಾ ಚೈನ್ ಲಿಂಕ್ ಮುರಿಯಲು ಸಾಧ್ಯ | ಜನತಾ ನ್ಯೂಸ್

21 Apr 2021
1595

ಬೆಂಗಳೂರು : ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನ ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಹೀಗೆ ಮಾಡಿದರೆ 14 ದಿನದಲ್ಲಿ ಕೊರೋನಾ ಸೋಂಕಿನ ಚೈನ್ ಲಿಂಕ್ ಮುರಿಯಲು ಸಾಧ್ಯವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸರ್ವಪಕ್ಷಗಳ ಸಭೆಯ ಬಳಿಕ ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ರವರೆಗೆ ನೈಟ್ ಕರ್ಪ್ಯೂ, ಮತ್ತು ವೀಕೆಂಡ್ ಕರ್ಪ್ಯೂ ತರಲಾಗಿದೆ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳನ್ನ ಕಟ್ಟುನಿಟ್ಟು ಪಾಲನೆ ಮಾಡುವುದರಿಂದ ಮೂರ್ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಲಿದೆ. ಜನರು ಭಯ ಪಡುವ ಅಗತ್ಯ ಇಲ್ಲ. ಸೋಂಕಿತರಾದವರೆಲ್ಲರೂ ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲ. ಯಾರು ಆಸ್ಪತ್ರೆಗೆ ದಾಖಲಾಗಬೇಕು, ಯಾರು ದಾಖಲಾಗಬಾರದು ಎಂದು ಇಂದು ಸಂಜೆ ವಿವರವಾಗಿ ಹೇಳುತ್ತೇನೆ ಎಂದು ಡಾ. ಸುಧಾಕರ್ ಹೇಳಿದರು.

ಈ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಎಲ್ಲಾ ಮಾರ್ಗಗಳ ಬಗ್ಗೆ ಅವಲೋಕನ ಮಾಡಲಾಯಿತು. ಅದರಂತೆ 14 ದಿನಗಳ ಕಾಲ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ನೈಟ್ ಕರ್ಫ್ಯೂ ಅವಧಿ ವಿಸ್ತರಣೆ, ವೀಕೆಂಡ್ ಕರ್ಫ್ಯೂ ಸೇರಿ ಹಲವು ಕ್ರಮಗಳನ್ನ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ 14 ದಿನ ಬಿಗಿ ಕ್ರಮಕ್ಕೆ ಸರ್ಕಾರ ಒತ್ತು ನೀಡಿದೆ. ರಾಜ್ಯದ ಜನರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದ್ದಾರೆ.

RELATED TOPICS:
English summary :Sudhakar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...