15 ದಿನಗಳ ನಂತರ ಸಾರಿಗೆ ನೌಕರರ ಮುಷ್ಕರ ಅಂತ್ಯ | ಜನತಾ ನ್ಯೂಸ್
ಬೆಂಗಳೂರು : 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯವಾಗಿದೆ. ಕಳೆದ 15ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದ ನೌಕರರು, ಹೈಕೋರ್ಟ್ ಆದೇಶದಂತೆ ಮುಷ್ಕರ ಅಂತ್ಯಗೊಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗಿದೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಇಂದು ಘೋಷಿಸಿದ್ದಾರೆ
ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಷ್ಕರ ನಿಲ್ಲಿಸಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆಯಿಂದ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದರು..
ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ನ್ಯಾಯಮೂರ್ತಿಗಳ ಸೂಚನೆ ನೀಡಿದ್ದಾರೆ. ಅವರ ಸೂಚನೆಯನ್ನು ನಾವು ಗೌರವಿಸುತ್ತೇವೆ. ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.