Thu,Apr25,2024
ಕನ್ನಡ / English

ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟಿರುವುದು ಭಿಕ್ಷೆಯಲ್ಲ | ಜನತಾ ನ್ಯೂಸ್

22 Apr 2021
1680

ಬೆಂಗಳೂರು : ರಾಜ್ಯ ಸರ್ಕಾರದ ಜಾಹೀರಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋವಿಡ್ ಸೂತಕದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ನಗುಮುಖದ ಜಾಹೀರಾತು ಜನರ ನೋವನ್ನು ಗೇಲಿ ಮಾಡುವಂತಿದೆ ಇಂತಹ ಸಂದರ್ಭದಲ್ಲಿ ಪ್ರಚಾರದ ಅಗತ್ಯವೇನಿತ್ತು ಎಂದು ಕಿಡಿಕಾರಿದ್ದಾರೆ.

ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ವಿಡಿಯೋ ಬಿಡುಗಡೆ ಮಾಡಿದ್ದಾರೆ. ಏರ್ಪೋರ್ಟ್‌ಗೆ ನಮ್ಮ ಮೆಟ್ರೋ ಸೌಲಭ್ಯ ಕಲ್ಪಿಸುವ ಎರಡನೇ ಹಂತ ಮತ್ತು ಮೂರನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದಕ್ಕೆ ರಾಜ್ಯ ಸರ್ಕಾರ ಪತ್ರಿಕೆಯ ಮುಖಪುಟಗಳಲ್ಲಿ ಜಾಹೀರಾತು ನೀಡಿರುವುದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಕೊರೊನಾ ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂತಹ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ.

ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ.

ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು.

ಸರ್ಕಾರ ಕೋವಿಡ್ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು.

ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ ಎಂದು ಸುಧೀರ್ಘವಾಗಿ ಬರೆದುಕೊಳ್ಳುವ ಮೂಲಕ ಹೆಚ್‍ಡಿಕೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

RELATED TOPICS:
English summary :HD Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...