Fri,Apr26,2024
ಕನ್ನಡ / English

ರಾಜ್ಯಗಳಿಗೆ ಆಮ್ಲಜನಕ ಪೂರೈಕೆ ಹೆಚ್ಚಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

22 Apr 2021
1081

ನವದೆಹಲಿ : ಪಿಎಂ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ದೇಶಾದ್ಯಂತ ಆಮ್ಲಜನಕದ ಪೂರೈಕೆಯನ್ನು ಪರಿಶೀಲಿಸಿದರು ಮತ್ತು ಅದರ ಲಭ್ಯತೆಯನ್ನು ಹೆಚ್ಚಿಸುವ ಮಾರ್ಗಗಳು ಮತ್ತು ವಿಧಾನಗಳ ಕುರಿತು ಚರ್ಚಿಸಿದರು. ಆಮ್ಲಜನಕದ ಪೂರೈಕೆಯನ್ನು ಸುಧಾರಿಸಲು ಕಳೆದ ಕೆಲವು ವಾರಗಳಲ್ಲಿ ಕೈಗೊಂಡ ಪ್ರಯತ್ನಗಳ ಬಗ್ಗೆ ಅಧಿಕಾರಿಗಳು ಅವರಿಗೆ ವಿವರಿಸಿದರು.

ಪ್ರಧಾನಿ ಮೋದಿಯವರು, ಅನೇಕ ಅಂಶಗಳಲ್ಲಿ ವೇಗವಾಗಿ ಕೆಲಸ ಮಾಡುವ ಅಗತ್ಯತೆಯ ಬಗ್ಗೆ ಮಾತನಾಡಿದರು. ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸುವುದು, ವಿತರಣೆಯ ವೇಗವನ್ನು ಹೆಚ್ಚಿಸುವುದು ಮತ್ತು ಆರೋಗ್ಯ ಸೌಲಭ್ಯಗಳಿಗೆ ಆಮ್ಲಜನಕದ ಬೆಂಬಲವನ್ನು ಒದಗಿಸಲು ನವೀನ ಮಾರ್ಗಗಳನ್ನು ಬಳಸುವುದು.

ರಾಜ್ಯಗಳಿಗೆ ಆಮ್ಲಜನಕದ ಪೂರೈಕೆ ಹೇಗೆ ಸ್ಥಿರವಾಗಿ ಹೆಚ್ಚಿಸಲಾಗುತ್ತಿದೆ ಎಂಬುದರ ಕುರಿತು ಪ್ರಧಾನ ಮಂತ್ರಿಗೆ ವಿವರಿಸಲಾಯಿತು. 20 ರಾಜ್ಯಗಳಿಂದ ಪ್ರತಿದಿನ 6,785ಮೆ.ಟನ್ ದ್ರವ ವೈದ್ಯಕೀಯ ಆಮ್ಲಜನಕದ ಪ್ರಸ್ತುತ ಬೇಡಿಕೆಗಿಂತ ಹೆಚ್ಚಾಗಿ, ಭಾರತ ಸರ್ಕಾರವು ಏಪ್ರಿಲ್ 21ರಿಂದ ಈ ರಾಜ್ಯಗಳಿಗೆ ದಿನಕ್ಕೆ 6,822 ಮೆ.ಟನ್ ಮೀಸಲಿಡಲಾಗುತ್ತಿದೆ.

ಅನಿವಾರ್ಯವಲ್ಲದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಯನ್ನು ನಿಷೇಧಿಸುವ ಮೂಲಕ ಹಾಗೂ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಸ್ಥಾವರಗಳು, ಕೈಗಾರಿಕೆಗಳು, ಆಮ್ಲಜನಕ ತಯಾರಕರ ಕೊಡುಗೆಗಳೊಂದಿಗೆ ಕಳೆದ ಕೆಲವು ದಿನಗಳಲ್ಲಿ, ದ್ರವ ವೈದ್ಯಕೀಯ ಆಮ್ಲಜನಕದ ಲಭ್ಯತೆಯು ದಿನಕ್ಕೆ 3,300ಮೆ.ಟನ್ ಹೆಚ್ಚಾಗಿದೆ ಎಂದು ಗಮನಿಸಲಾಗಿದೆ.

ಮಂಜೂರಾದ ಪಿಎಸ್‌ಎ ಆಮ್ಲಜನಕ ಸ್ಥಾವರಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ರಾಜ್ಯಗಳೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ, ಎಂದು ಅಧಿಕಾರಿಗಳು ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ, ರಾಜ್ಯಗಳಿಗೆ ಓ2 ಪೂರೈಕೆ ಸುಗಮವಾಗಿ, ಅಡೆತಡೆಯಿಲ್ಲದೆ ನಡೆಯುವಂತೆ ನೋಡಿಕೊಳ್ಳಬೇಕೆಂದು ಪ್ರಧಾನಿ ಮೋದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು, ಎಂದು ಪ್ರಧಾನಿ ಕಾರ್ಯಾಲಯ ಪ್ರಕಟಿಸಿದೆ.

RELATED TOPICS:
English summary :PM Modi held high level meeting on supply of Oxygen to states

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...