ಮಾಜಿ ಸಿಎಂ ಕುಮಾರಸ್ವಾಮಿ ಕೊರೊನಾ ಸೋಂಕಿನಿಂದ ಗುಣಮುಖ | ಜನತಾ ನ್ಯೂಸ್
ಬೆಂಗಳೂರು : ಕರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ, ಇಂದು ಮಧ್ಯಾಹ್ನ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದು ಟ್ವೀಟ್ ಮಾಡಿದ್ದಾರೆ.
RELATED TOPICS:
English summary :HD Kumaraswamy