Fri,Apr26,2024
ಕನ್ನಡ / English

ಕೋವಿಡ್‌ ಲಸಿಕೆ ಉಚಿತವಾಗಿ ನೀಡಿ, ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಮನವಿ! | ಜನತಾ ನ್ಯೂಸ್

24 Apr 2021
1863

ಬೆಂಗಳೂರು : ಮೇ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೋರಿದ್ದಾರೆ.

ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ.

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು ₹2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ ₹2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು ಎಂದು ಅವರು ಟ್ವೀಟ್‌ ಮೂಲಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸುತ್ತೇನೆ. ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದಿದ್ದಾರೆ.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...