ನಾಳೆ ರಾತ್ರಿಯಿಂದ ಕರ್ನಾಟಕದಲ್ಲಿ 14 ದಿನ ಲಾಕ್ಡೌನ್! ಕೊವಿಡ್ ಕರ್ಫ್ಯೂ! | ಜನತಾ ನ್ಯೂಸ್
ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್19 ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವುದರಿಂದ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್ಡೌನ್ ಜಾರಿಯಾಗಲಿದೆ.
ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಬಿಬಿಎಂಪಿ ಅಧಿಕಾರಿಗಳು ಲಾಕ್ಡೌನ್ ಅನಿವಾರ್ಯ. ಬೆಂಗಳೂರಿನಲ್ಲಿ ಲಾಕ್ಡೌನ್ ಆಗದಿದ್ರೆ ಬೆಂಗಳೂರಿನ ಸ್ಥಿತಿ ಕೈ ಮೀರಬಹದು. ತಜ್ಞರು ಸಹ ಲಾಕ್ಡೌನ್ ಮಾಡಲು ಸಲಹೆ ನೀಡಿದ್ದಾರೆ ಎಂದು ಸಿಎಂ ಗಮನಕ್ಕೆ ತಂದಿದ್ದರು.
ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ.
ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.