Fri,Apr26,2024
ಕನ್ನಡ / English

ಬೆಂಗಳೂರಿಂದ ಹಳ್ಳಿಗಳಿಗೆ ಬಂದವರ ಮೇಲೆ ನಿಗಾ ಇಡಿ: ಜಿಲ್ಲಾಡಳಿತಗಳಿಗೆ ಸಿಎಂ ಬಿಎಸ್​​ವೈ ಸೂಚನೆ | ಜನತಾ ನ್ಯೂಸ್

29 Apr 2021
1308

ಬೆಂಗಳೂರು : ಬಹಳಷ್ಟು ಜನರು ಕಳೆದ ವಾರದಿಂದ ಬೆಂಗಳೂರಿನಿಂದ ಹಳ್ಳಿಗಳ ಕಡೆಗೆ ಹೋಗ್ತಾ ಇದ್ದಾರೆ. ಅವರ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಆಯಾ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ‌ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರತಜ್ಞರು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್‌ ಮತ್ತು ನಿರ್ದೇಶಕರುಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು.

ನಂತರ ಮಾತನಾಡಿದ ಸಿಎಂ, ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಿಸಲು ಸಾಕಷ್ಟು ಕ್ರಮ ಕೈಗೊಳ್ಳಬೇಕು, ಪ್ರತಿ ತಾಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ತೆರೆಯುವ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಹೋಂ ಐಸೋಲೇಷನ್ ಬಯಸುವವರಿಗೆ ಅಲ್ಲೇ ಸೂಕ್ತ ವೈದ್ಯಕೀಯ ಸಲಹಾ ವ್ಯವಸ್ಥೆ ಮಾಡಬೇಕು. ಗಡಿ ಜಿಲ್ಲೆಗಳಿಗೆ ಮಹಾರಾಷ್ಟ್ರ ಮುಂತಾದ ಕಡೆಗಳಿಂದ ಸೋಂಕಿತರು ಬರುತ್ತಾರೆ. ಅವರೇ ನಮ್ಮ ಆಸ್ಪತ್ರೆಗಳಲ್ಲಿ ತುಂಬಾ ಇದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು, ರೋಗಿಗಳಿಗೆ ಮೆಡಿಕಲ್ ಕಿಟ್ ಕೊಡುವ ವ್ಯವಸ್ಥೆ ಕೂಡ ತಮ್ಮ ಹಂತದಲ್ಲಿ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಕಿಟ್ ವಿತರಿಸಲು ಹಾಗೂ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆ ಸಿಎಂ ಸಲಹೆ ನೀಡಿದರು.

ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ ಮತ್ತು ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚನೆ.

ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ಯಾರು ಯಾರಿಗೆ ಅತೀ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು.

ರೆಮ್ ಡಿಸಿವಿರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ಅಗತ್ಯವಿರುವವರಿಗೆ ಮಾತ್ರ ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

RELATED TOPICS:
English summary :BSYediyurappa

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...