ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 4,01,993 ಹೊಸ ಪ್ರಕರಣ | ಜನತಾ ನ್ಯೂಸ್
ನವದೆಹಲಿ: : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 4,01,993 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ 3,523 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ನಿಂದ 2.11ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 1.91ಕೋಟಿಗೆ (1,91,64,969) ಏರಿಕೆಯಾಗಿದೆ. ಇದರಲ್ಲಿ 32,68,710 ಸಕ್ರಿಯ ಕೋವಿಡ್ ಪ್ರಕರಣಗಳು.
1,56,84,406 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 15,49,89,635 ಮಂದಿ ಮುಂಜಾಗ್ರತಾ ಕ್ರಮವಾಗಿ ವಾಕ್ಸಿನ್ ಪಡೆದುಕೊಂಡಿದ್ದಾರೆ.
English summary :Corona Virus in India