Thu,Apr18,2024
ಕನ್ನಡ / English

ಸಂಕಷ್ಟದ ಸಮಯದಲ್ಲಿ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಬೇಡ: ಡಿಕೆಶಿ ಮನವಿ | ಜನತಾ ನ್ಯೂಸ್

02 May 2021
1315

ಬೆಂಗಳೂರು : ಮಸ್ಕಿ ಕ್ಷೇತ್ರದಲ್ಲಿ ಬಹಳ ದೊಡ್ಡ ಅಂತರದಿಂದ ಗೆದ್ದಿದ್ದೇವೆ. ಕಾಂಗ್ರೆಸ್ನ ಬಸನಗೌಡ ತುರವಿಹಾಳ ಗೆಲುವು ಸಾಧಿಸಿದ್ದಾರೆ. ಆದರೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡದಂತೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಕೊವಿಡ್ ನಿಯಮಾವಳಿ ಉಲ್ಲಂಘಿಸದಂತೆ ಡಿಕೆಶಿ ಕೇಳಿಕೊಂಡಿದ್ದಾರೆ.

ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ನಾವು ನಮ್ಮ ಜನರ ಜೀವ ಉಳಿಸುವ ಬಗ್ಗೆ ಗಮನ ಹರಿಸಬೇಕು. ಹೀಗಾಗಿ ಚುನಾವಣೆ ಫಲಿತಾಂಶ ಏನೇ ಬರಲಿ, ನಾವು ಸಂಭ್ರಮಾಚರಣೆ ಮಾಡುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಹಿನ್ನೆಲೆಯಲ್ಲಿ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು, ಇವತ್ತು ನಾವೆಲ್ಲ ಫಲಿತಾಂಶ ನೋಡುತ್ತಿದ್ದು, ಮತದಾರರ ತೀರ್ಪನ್ನು ಸ್ವಾಗತ ಮಾಡುತ್ತೇವೆ. ಸೋಲು, ಗೆಲುವು ಎರಡನ್ನೂ ಒಪ್ಪಿಕೊಳ್ಳಬೇಕು. ಇದು ಪ್ರಜಾಪ್ರಭುತ್ವದ ನಿಯಮ ಎಂದರು.

ನಿಯಮಾವಳಿ ಉಲ್ಲಂಘಿಸಿದರೆ ದೂರು ದಾಖಲಿಸಬಹುದು. ಹಾಗಾಗಿ ಯಾವುದೇ ಸಂಭ್ರಮಾಚರಣೆ ಮಾಡ ಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜ‌ನ ಬದಲಾವಣೆ ಬಯಸಿದ್ದಾರೆ. ಏನೇ ಫಲಿತಾಂಶ ಆಗಲಿ ರಾಜ್ಯಕ್ಕೆ ಒಳ್ಳೆ ವಾತಾವರಣ ಬಯಸ್ತಿದ್ದಾರೆ. ಮತದಾರರು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ.

ಇಡೀ ದೇಶದ ಅಧಿಕಾರ, ಅಧಿಕಾರಿಗಳನ್ನು ಬಳಸಿಕೊಂಡು ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ಮಾಡಿ, ಆ ಹೆಣ್ಣು ಮಗಳಿಗೆ ಕೊಟ್ಟಿರುವ ಕಿರುಕುಳ ಕಂಡು ಸಿಟ್ಟಿಗೆದ್ದ ಜನ ಈ ಫಲಿತಾಂಶ ಕೊಟ್ಟಿದ್ದಾರೆ. ಅವರಿಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲೂ ಚುನಾವಣೆ ಮುಂದೂಡಿ ಅಂತ ನಾವು ಸಾಕಷ್ಟು ಬಾರಿ ಕೇಳಿಕೊಂಡ್ವಿ. ಆದರೂ ಮಾತು ಕೇಳಲಿಲ್ಲ. ಈಗ ಅನುಭವಿಸ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

RELATED TOPICS:
English summary :DKShivakumar

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...