ಕೋವಿಡ್ ಬಂದು ನಾನ್ ಸತ್ತೋದ್ರು ಪರವಾಗಿಲ್ಲ.. ನಾಳೆ ಸಿಎಂ ಮನೆ ಮುಂದೆ ಧರಣಿ ಕೂರೋದೆ: ರೇವಣ್ಣ | ಜನತಾ ನ್ಯೂಸ್

02 May 2021
491
Revanna

ಹಾಸನ : ಕೋವಿಡ್ ಬಂದು ಬೇಕಾದ್ರೆ ನಾನ್ ಸತ್ತೋದ್ರು ಪರವಾಗಿಲ್ಲ. ಯಾರು ಹೇಳಿದ್ರೂ ಕೇಳಲ್ಲ. ನಾಳೆ ಸಿಎಂ ಮನೆ ಮುಂದೆ ಹೋಗಿ ಅಲ್ಲಿಯೇ ಧರಣಿ ಕೂರೋದೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ಜನರು ರೋಡಲ್ಲಿ ಬಿದ್ದು ಸಾಯ್ತಿದ್ದಾರೆ, ಹೇಳೋರು ಕೇಳೋರು ಯಾರು ಇಲ್ಲವೇ? ಖಾಸಗಿ ಆಸ್ಪತ್ರೆ ಬೆಡ್​ಗಳು ಎಂಎಲ್​ಎ ಮನೆಯವರಿಗೆ ಮತ್ತು ಅವರ ಸಂಬಂಧಿಕರು, ಅಧಿಕಾರಿಗಳ ಮಕ್ಕಳಿಗೆ ಮೀಸಲಿವೆ. ಹೇಳೋರು ಕೇಳೋರು ಯಾರೂ ಇಲ್ವೆ? ಎಂದು ಮಾಜಿ ಸಚಿವ ಎಚ್​.ಡಿ. ರೇವಣ್ಣ ರಾಜ್ಯ ಸರ್ಕಾರವನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಹಾಸನ ಜಿಲ್ಲೆಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಹಾಸನ ಹಿಮ್ಸ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಕೃಷ್ಣಮೂರ್ತಿ ಅವರನ್ನ ದಿಢೀರ್ ವರ್ಗಾವಣೆ ಮಾಡಿರುವ ಸರ್ಕಾರದ ವಿರುದ್ಧ ಗರಂ ಆದ ರೇವಣ್ಣ, ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ರೆಮ್ಡಿಸಿವಿಯರ್ ಚುಚ್ಚುಮದ್ದು ಸಿಕ್ತಿಲ್ಲ. ಜನ ಸಾಯುತ್ತಿದ್ದಾರೆ, ಇವನ್ನೆಲ್ಲಾ ನೋಡಿಕೊಂಡು ನಾನು ಬದುಕಿರಬೇಕಾ? ಹಾಗಾಗಿ ನಾಳೆ ಬೆಳಗ್ಗೆ ಎದ್ದು ಶಿವಪ್ಪನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಕೊಂಡು ಒಂಬತ್ತು ಗಂಟೆ ಒಳಗೆ ಮುಖ್ಯಮಂತ್ರಿ ಮನೆ ಮುಂದೆ ಅಲ್ಲೇ ಮಲ್ಕೊಂಡು ಧರಣಿ ಮಾಡ್ತೀನಿ ಎಂದಿದ್ದಾರೆ.

ಜಿಲ್ಲೆಯಲ್ಲಿ ಕೂಲಿ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲಿ ಬಡವರಿಗೆ ರಾಗಿ, ಅಕ್ಕಿ, ಗೋಧಿ, ಸೇರಿದಂತೆ ಒಂದೊಂದು ಕುಟುಂಬಕ್ಕೆ ₹5 ಸಾವಿರ ಕೊಡಿ. ಬಡವರ ಶಾಪ ಒಳ್ಳೆದಲ್ಲ. ರಾಜ್ಯದ ತೆರಿಗೆ ಹಣದಲ್ಲಿ ಬಡವರಿಗೆ ಇಂಥ ಸಂದರ್ಭದಲ್ಲಿ ಕೊಡಿ ಎಂದು ಆಗ್ರಹ ಮಾಡಿದರು.

ನನಗೆ ಕರೊನಾ ಬಂದ್ರೂ ಪರವಾಗಿಲ್ಲ. ಸಿಎಂ ಮನೆ ಮುಂದೆ ಧರಣಿ ಮಾಡಿ ಅಲ್ಲಿಯೇ ಮಲಗುತ್ತೇನೆ. ಕೂಡಲೇ ಜಿಲ್ಲಾ ಸರ್ಜನ್​ ವರ್ಗಾವಣೆ ರದ್ದು ಮಾಡಲಿ ಎಂದು ರೇವಣ್ಣ ಆಗ್ರಹಿಸಿದರು. ನಮ್ಮಪ್ಪ ಹೇಳಿದರೂ ನಾನು ಕೇಳಲ್ಲ, ಹೋರಾಡುತ್ತೇನೆ. ನಮ್ಮ ಜನವೇ ಇಲ್ಲ ಅಂದಮೇಲೆ ನನ್ನ ಪ್ರಾಣ ಇಟ್ಕೊಂಡು ಏನು ಮಾಡೋದು? ಮೇ ತಿಂಗಳ ಅಂತಿಮದೊಳಗೆ ಯಾರು ಉಳೀತಾರೆ, ಯಾರು ಇರಲ್ಲ ಅನ್ನೊದು ಗೊತ್ತಿಲ್ಲ. ಈ ಮಾತನ್ನ ತಜ್ಞರು ಹೇಳುತ್ತಿದ್ದಾರೆ ಎಂದರು.

RELATED TOPICS:
English summary :Revanna

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...