Fri,Apr26,2024
ಕನ್ನಡ / English

ಪ.ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರಗಳ ಬಗ್ಗೆ ಟ್ವೀಟ್ ಮಾಡಿದ ಕಂಗನಾ ಖಾತೆ ಸ್ಥಗಿತಗೊಳಿಸಿದ ಟ್ವಿಟ್ಟರ್ | ಜನತಾ ನ್ಯೂಸ್

04 May 2021
2203

ಮನಾಲಿ : ಕಳೆದೆರಡು ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರಗಳ ಕುರಿತು ಸಂದೇಶ ರವಾನಿಸಿದರು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಅವರ ಟ್ವಿಟರ್ ಅಕೌಂಟ್ ಅನ್ನು ಟ್ವಿಟರ್ ಯಾವುದೇ ಸೂಕ್ತ ಕಾರಣ ನೀಡದೇ ಸ್ಥಗಿತಗೊಳಿಸಿದೆ.

ಖಾತೆ ನಿಷ್ಕ್ರಿಯಗೊಳಿಸುವ ಕೆಲ ನಿಮಿಷದ ಹಿಂದಷ್ಟೇ ಕಂಗನಾ ಅವರು ತುಂಬಾ ಭಾವುಕರಾಗಿ ಮಾತನಾಡಿರುವ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನೆಲೆ ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕವಾಗಿ ಹತ್ಯೆ ಅತ್ಯಾಚಾರ ನಡೆಯುತ್ತಿರುವ ಬಗ್ಗೆ ಮಾತನಾಡಿದ್ದು, ತಾನು ಹಿಂಸಾಚಾರದಿಂದ ಸಾಕಷ್ಟು ನೊಂದಿರುವುದಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕವಾಗಿ ಜನರ ಹತ್ಯೆ ನಡೆಯುತ್ತಿದೆ, ಅತ್ಯಾಚಾರ ನಡೆಯುತ್ತಿದೆ, ಮನೆಗಳನ್ನು ಸುಡಲಾಗುತ್ತಿದೆ ಈ ಬಗ್ಗೆ ಹೆಸರಾಂತ ಮಿಡಿಯಾಗಳು ಮಾತನಾಡುತ್ತಿಲ್ಲ. ಹೊರಗಿನಿಂದ ಹಿಂದೂಗಳ ವಿರುದ್ಧ ಏನೋ ಷಡ್ಯಂತ್ರ ಮಾಡಲಾಗುತ್ತಿದೆ, ಎಂದು ಆರೋಪಿಸಿದ್ದರು.

ಹಾಗೂ ಹಿಂಸಾಚಾರವನ್ನು ವಿರೋಧಿಸಿ ಬಿಜೆಪಿ ನಡೆಸಲು ಮುಂದಾಗಿರುವ ಧರಣಿ ಕುರಿತು ಅಸಮಧಾನ ವ್ಯಕ್ತಪಡಿಸಿರುವ ಕಂಗನಾ ಅವರು, ದೇಶದ್ರೋಹಿಗಳಿಗೆ ನೀವು ಏಕೆ ಹೆದರುತ್ತಾ ಇದ್ದೀರಾ? ದೇಶದ್ರೋಹಿಗಳೇ ದೇಶ ನಡೆಸಲಿದ್ದಾರೆಯೇ? ನನಗೆ ಗೊತ್ತು ಅವರು ತುಂಬಾ ಸದ್ದು ಮಾಡುತ್ತಾರೆ, ಅಂತಾರಾಷ್ಟ್ರೀಯ ಒತ್ತಡವಿದೆ ಎಂದು ನನಗೆ ಗೊತ್ತು. ಆದರೆ ಈಗ ಈ ಸಂದರ್ಭದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಗತ್ಯವಿದೆ. ರಾಷ್ಟ್ರಪತಿ ಆಳ್ವಿಕೆಯನ್ನು ಜವಾಹರಲಾಲ್ ನೆಹರು 8-12, ಇಂದಿರಾಗಾಂಧಿಯವರು 50 ಭಾರಿ ಮಾಡಿದ್ದರು, ಮನಮೋಹನ್ ಸಿಂಗ್ ಅವರು 10-12 ಭಾರಿ ಮಾಡಿದ್ದರು. ಹಾಗಿದ್ದರೆ, ನಾವ್ಯಾರಿಗೆ ಹೇದುರುತ್ತಿದ್ದೇವೆ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಲ್ಲದೇ, ಈ ದೇಶವನ್ನು ದೇಶದ್ರೋಹಿಗಳು ನಡೆಸಲಿದ್ದಾರೆಯೇ? ಅಮಾಯಕರ ಹತ್ಯೆ ನಡೆಯುತ್ತಿದ್ದರೆ, ನಾವು ಕೇವಲ ಧರಣಿ ನಡೆಸಲಿದ್ದೆವೆಯೇ? ನಾನು ನಮ್ಮ ಸರ್ಕಾರವನ್ನು ಬೇಡಿಕೊಳ್ಳುತ್ತಿದ್ದೇನೆ. ಈ ನರಮೇಧಗಳನ್ನು ಆದಷ್ಟು ಬೇಗ ನಿಲ್ಲಿಸಿ ಮತ್ತು ಅತ್ಯಂತ ಕಠಿಣ ಕ್ರಮವನ್ನು ಜರುಗಿಸಿ, ಎಂದು ಒತ್ತಾಯಿಸಿದ್ದರು.

ಸೋಶಿಯಲ್ ಮೀಡಿಯಾದಲ್ಲಿ ಲಕ್ಷಗಟ್ಟಲೆ ಹಿಂಬಾಲಕರನ್ನು ಹೊಂದಿರುವ ಬಾಲಿವುಡ್‌ ಕ್ವೀನ್ ಕಂಗನಾ ರಣಾವತ್ ಅವರ ಖಾತೆಗಳನ್ನು ವಿಶೇಷವಾಗಿ ಟ್ವಿಟ್ಟರ್, ಪದೇಪದೇ ಅನೇಕ ಬಾರಿ ಸ್ಥಗಿತಗೊಳಿಸುತ್ತಲೇ ಬಂದಿದೆ. ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ಪ್ರಕಟಗೊಂಡು, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಮುಂದಾಗಿದೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಕಂಗನಾ ರಣಾವತ್ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಟ್ವೀಟ್ ಮಾಡಿದ್ದರು.

RELATED TOPICS:
English summary :Tweets on WB gerontocides : Twitter suspended Kangana account

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...