Sat,Apr20,2024
ಕನ್ನಡ / English

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂಸ್

06 May 2021
1785

ಬೆಂಗಳೂರು : ಲಸಿಕೆ ವಿತರಣೆಯಲ್ಲಿ ಕರ್ನಾಟಕ ಮತ್ತು ಗುಜರಾತ್ ರಾಜ್ಯಕ್ಕೆ ತೋರಿದ ತಾರತಮ್ಯದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರದ ವಿರುದ್ದ ಬೇಸರ ವ್ಯಕ್ತ ಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ, 25 ಸಂಸದರನ್ನು ಇಲ್ಲಿಂದ ಕಳುಹಿಸಿದ್ದರೂ, ಕರ್ನಾಟಕದ ಬಗ್ಗೆ ಕೇಂದ್ರ ಸರಕಾರ ತೋರುತ್ತಿರುವ ಮಲತಾಯಿ ಧೋರಣೆ ಮಾನವೀಯತೆಗೆ ವಿರುದ್ದ ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, 18-44 ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನ ಮೇ 1ರಿಂದ ಆರಂಭವಾಗಿದೆ. ದೇಶದಲ್ಲಿ ಮಂಗಳವಾರದ ಹೊತ್ತಿಗೆ 6 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ ಗುಜರಾತ್‌ನಲ್ಲಿ 1,61,000 ಜನರಿಗೆ ಲಸಿಕೆ ಹಾಕಲಾಗಿದ್ದರೆ, ಕರ್ನಾಟಕದಲ್ಲಿ ಕೇವಲ 3475 ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. ಇದು ಕೇಂದ್ರದ ತಾರತಮ್ಯವೋ, ರಾಜ್ಯದ ವೈಫಲ್ಯವೋ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್‌ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ. ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರದ ಪರಮ ವೈಫಲ್ಯ

ರಾಜ್ಯಕ್ಕೆ ಕೇಂದ್ರ ಸರ್ಕಾರ ಲಸಿಕೆ ನೀಡುತ್ತಿಲ್ಲವೇ? ರಾಜ್ಯಕ್ಕೆ ಏನು ಬೇಕೋ ಅದನ್ನು ಕೇಳಿ ಪಡೆಯಲು ರಾಜ್ಯ ಸರ್ಕಾರಕ್ಕೆ ಶಕ್ತಿ ಇಲ್ಲವೇ? ಇತರ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ಪ್ರಶ್ನಿಸಲು ನಮ್ಮವರಿಗೆ ಬಾಯಿಲ್ಲವೇ? ಇದೆಲ್ಲ ಗಮನಿಸುತ್ತಿದ್ದರೆ, ಕನ್ನಡರಿಗರನ್ನು ಈ ಸರ್ಕಾರಗಳು ಹಣೆಬರಹಕ್ಕೆ ಬಿಟ್ಟಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

RELATED TOPICS:
English summary :HD Kumaraswamy

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...