Sat,Apr27,2024
ಕನ್ನಡ / English

ಕೋವಿಡ್-19 : 4 ರಾಜ್ಯಗಳ ಸಿಎಂಗಳಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

08 May 2021
1720

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರತ್ಯೇಕವಾಗಿ ದೂರವಾಣಿ ಕರೆಯಲ್ಲಿ ಮಾತನಾಡಿ, ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ ಮತ್ತು ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ಅವರೊಂದಿಗೆ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಕೋವಿಡ್ -19 ಸೋಂಕಿನ ಎರಡನೇ ತರಂಗದಲ್ಲಿ ಮಹಾರಾಷ್ಟ್ರವು ಹೆಚ್ಚು ಪರಿಣಾಮ ಬೀರುವ ರಾಜ್ಯವಾಗಿದೆ. ಒಂದು ದಿನದಲ್ಲಿ ವರದಿಯಾದ ಹೊಸ ಕೋವಿಡ್-19 ಪ್ರಕರಣಗಳಲ್ಲಿ ಶೇಕಡಾ 72% ರಷ್ಟು ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗುತ್ತಿದೆ, ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಮಹಾರಾಷ್ಟ್ರ ಸಿಎಂ ಠಾಕ್ರೆ ಕೇಂದ್ರಕ್ಕೆ ಪತ್ರ ಬರೆದು, ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಗಾಗಿ ಪ್ರತ್ಯೇಕ ಅಪ್ಲಿಕೇಶನ್ ಅಭಿವೃದ್ಧಿಪಡಿಸಲು ಅನುಮತಿ ಕೋರಿದರು. ತಮ್ಮ ಪತ್ರದಲ್ಲಿ ಕೋವಿನ್ ನೋಂದಣಿ ಪೋರ್ಟಲ್ ನಲ್ಲಿ ಆಗಾಗ್ಗೆ ತೊಂದರೆಗಳ ದೂರುಗಳ ಹಿನ್ನೆಲೆಯಲ್ಲಿ ಅವರು ಈ ಪತ್ರವನ್ನು ಬರೆಯುತ್ತಿರುವುದಾಗಿ ತಿಳಿಸಿದ್ದಾರೆ, ಎನ್ನಲಾಗಿದೆ.

ಪ್ರಧಾನಿ ಮೋದಿಯವರೊಂದಿಗಿನ ದೂರವಾಣಿ ಕರೆಯ ನಂತರ ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಅವರು, ರಾಜ್ಯದ ನಿರಂತರವಾಗಿ ಕಡಿಮೆಯಾಗುತ್ತಿರುವ ಧನಾತ್ಮಕತೆ ದರ ಮತ್ತು ವೇಗವಾಗಿ ಹೆಚ್ಚುತ್ತಿರುವ ಚೇತರಿಕೆ ದರ ಕುರಿತು ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಲಾಗಿದೆ, ಎಂದು ಟ್ವೀಟ್ ಮಾಡಿದ್ದಾರೆ. ಜನತಾ ಕರ್ಫ್ಯೂ ಸೇರಿದಂತೆ ವೈರಸ್ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಪ್ರಧಾನ ಮಂತ್ರಿಯೊಂದಿಗೆ ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶ ಸರ್ಕಾರದ ಪ್ರಯತ್ನಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು ಮತ್ತು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದರು, ಎಂದು ಚೌಹಾನ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಅವರು ಕೋವಿಡ್ ರೋಗಿಗಳಿಗೆ ಆಮ್ಲಜನಕವನ್ನು ಒದಗಿಸಲು ರಾಜ್ಯ ಸರ್ಕಾರದ ಕ್ರಮಗಳು, ಆಸ್ಪತ್ರೆಯ ಹಾಸಿಗೆಗಳ ಸ್ಥಿತಿ ಮತ್ತು ವ್ಯಾಕ್ಸಿನೇಷನ್ ಡ್ರೈವ್ ಕುರಿತು ಪ್ರಧಾನಿ ಮೋದಿಯವರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.

RELATED TOPICS:
English summary :COVID-19 : PM Modi spoke to 4 states CM over telephone

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...