Sat,Apr27,2024
ಕನ್ನಡ / English

ಕೇಂದ್ರ ಸರ್ಕಾರದಿಂದ ಕೋವಿಶೀಲ್ಡ್, ಕೋವ್ಯಾಕ್ಸಿನ್ ಪೂರೈಕೆ, ನಾಳೆಯಿಂದಲೇ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ! | ಜನತಾ ನ್ಯೂಸ್

09 May 2021
1063

ಬೆಂಗಳೂರು : ನಾಳೆ (ಮೇ 10)ರಿಂದಲೇ ರಾಜ್ಯದಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸಿಕ್ಕಲಿದೆ. ಆದರೆ ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ, ನಿಮ್ಹಾನ್ಸ್, ಜಯನಗರದ ಜನರಲ್ ಆಸ್ಪತ್ರೆ, ಇಎಸ್‌ಐ, ಸರ್ ಸಿ.ವಿ.ರಾಮನ್ ಜನರಲ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್ ಲಸಿಕೆ ಹಾಕಲಾಗುತ್ತೆ. ಹಾಗೂ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತೆ. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ನಿನ್ನೆ 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ತಲುಪಿದೆ. ಈವರೆಗೂ ಒಟ್ಟು 6.5 ಲಕ್ಷ ಡೋಸ್ ರಾಜ್ಯಕ್ಕೆ ತಲುಪಿದೆ. ಕೇಂದ್ರ ಸರ್ಕಾರದಿಂದ 99,58,190 ಡೋಸ್ ಕೊವಿಶೀಲ್ಡ್, 10,91,280 ಡೋಸ್ ಕೊವ್ಯಾಕ್ಸಿನ್ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಿದ್ದು ಈವರೆಗೆ ಒಟ್ಟು 1,10,49,470 ಡೋಸ್ ಲಸಿಕೆ ತಲುಪಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ.

ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರಲ್ಲಿ, ಅದರಲ್ಲೂ ವಿಶೇಷವಾಗಿ ನನ್ನ ಯುವ ಮಿತ್ರರಲ್ಲಿ ನನ್ನ ಮನವಿ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ. ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

RELATED TOPICS:
English summary :Sudhakar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...