Fri,Apr26,2024
ಕನ್ನಡ / English

ಕರ್ನಾಟಕದ ಮಾಜಿ ಸಚಿವ ಕೊರೋನಾಗೆ ಬಲಿ, ಬಿಎಸ್‌ವೈ, ಗಣ್ಯರ ಸಂತಾಪ! | ಜನತಾ ನ್ಯೂಸ್

09 May 2021
1588

ಬೆಂಗಳೂರು : ಮಾಜಿ ಸಚಿವ ಕೆ. ಬಿ.ಶಾಣಪ್ಪ ಕೋವಿಡ್-19 ಸೋಂಕಿನಿಂದ ಇಂದು ಮೃತಪಟ್ಟಿದ್ದಾರೆ.

82 ವರ್ಷದ ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಭಾನುವಾರ) ಮೃತಪಟ್ಟಿದ್ದಾರೆ.

ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು.

ಮಾಜಿ ಸಚಿವ ಕೆ.ಬಿ.ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಮಿಕ ನಾಯಕರಾಗಿ, ಸಚಿವರಾಗಿ, ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು, ಸದನದಲ್ಲಿ ಸದಾ ನೊಂದ ಜನರ ದನಿಯಾಗಿದ್ದರು.

ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ಸ್ವಭಾವದ ನಾಯಕರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿರಿಯ ಮುತ್ಸದ್ಧಿ ರಾಜಕಾರಣಿ ಕೆ. ಬಿ. ಶಾಣಪ್ಪನವರು ಕೊರೊನಾ ಸೋಂಕಿನಿಂದ ನಿಧನರಾದ ಸುದ್ದಿ ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

2006ರಿಂದ 12 ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಕೆ.ಬಿ ಶಾಣಪ್ಪ, 2012-18 ರವರೆಗೆ ವಿಧಾನಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

RELATED TOPICS:
English summary :KB Shanappa

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...