ಎಲ್ಲರೂ ಒಟ್ಟಾಗಿ ಕೋವಿಡ್ ಸೋಂಕನ್ನು ಸೋಲಿಸೋಣ: ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಎಲ್ಲಾ ಸಂಸದರು ಮತ್ತು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಉಳಿದು ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕೆಂದು ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು,ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದು, ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕು ಎಂದಿದ್ದಾರೆ.
ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೋನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಿ ಎಂದು ಮನವಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಕಠಿಣ ನಿಯಮಗಳು ಜಾರಿಯಾಗಿದೆ. ಇಂದಿನಿಂದ ಮೇ 24ರವರೆಗೆ ಈ ನಿಯಮಗಳು ಜಾರಿಯಲ್ಲಿಲಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅವಕಾಶವಿದೆ. ಆದರೆ ವಾಹನಗಳನ್ನು ರಸ್ತೆಗಿಳಿಸಲು ಅವಕಾಶವಿಲ್ಲ.