Tue,Apr23,2024
ಕನ್ನಡ / English

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂಸ್

10 May 2021
1926

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ರಾಜ್ಯಾದ್ಯಂತ ಇಂದು 39,305 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇದರಲ್ಲಿ ಅರ್ಧದಷ್ಟು ಪಾಲು ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ 16,747 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 704 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆ ಶತಕ ದಾಟಿದ ಜಿಲ್ಲೆಗಳೆಂದರೆ ಕುಲಬುರಗಿಯಲ್ಲಿ 988, ಮೈಸೂರು ನಲ್ಲಿ 1537, ಬೀದರ್ ನಲ್ಲಿ 305, ದಕ್ಷಿಣ ಕನ್ನಡದಲ್ಲಿ 1175, ಹಾಸನದಲ್ಲಿ 1800, ತುಮಕೂರುನಲ್ಲಿ 2168, ಬಳ್ಳಾರಿ 973, ಮಂಡ್ಯದಲ್ಲಿ 1133, ಧಾರವಾಡದಲ್ಲಿ 1006, ವಿಜಯಪುರದಲ್ಲಿ 659, ಶಿವಮೊಗ್ಗದಲ್ಲಿ 820, ಬೆಳಗಾವಿಯಲ್ಲಿ 736, ಚಿಕ್ಕಬಳ್ಳಾಪುರದಲ್ಲಿ 599, ದಾವಣಗೆರೆಯಲ್ಲಿ 197, ಕೋಲಾರದಲ್ಲಿ 755, ಚಾಮರಾಜನಗರದಲ್ಲಿ 623, ಕೊಡಗುನಲ್ಲಿ 534, ಕೊಪ್ಪಳದಲ್ಲಿ 412, ಉಡುಪಿಯಲ್ಲಿ 855, ರಾಮನಗರದಲ್ಲಿ 337 ಹಾಗೂ ಉತ್ತರ ಕನ್ನಡ 885 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 596 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 14,289 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 32,188 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 13,83,285 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 596 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 374 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 19,372 ಆಗಿದೆ.

RELATED TOPICS:
English summary :COVID-19 statewide 596 deaths : Today 39,305 new case in Karnataka, 16,747 in Bengaluru

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...