ಈ ರಾಜ್ಯದ ವಿಷಬೀಜದ ಹೆಸರು ತೇಜಸ್ವಿ ಸೂರ್ಯ: ಡಿಕೆಶಿ ಕಿಡಿ | ಜನತಾ ನ್ಯೂಸ್

11 May 2021
476
DKShivakumar

ಬೆಂಗಳೂರು : ತೇಜಸ್ವಿ ಸೂರ್ಯ ಅವರನ್ನು ವಿಷ ಬೀಜಕ್ಕೆ ಹೋಲಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.

ಬೆಡ್‍ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವನ ಬಗ್ಗೆ ಏನು ಹೇಳೋದು? ಅಧಿಕಾರಿ ಕೊಟ್ಟಿದ್ದ ಹೆಸರನ್ನು ಓದಿದ್ದೇನೆ ಎಂದು ಹೇಳಿದ್ದಾರೆ. ಅಧಿಕಾರಿ ಒಂದೇ ಸಮುದಾಯದ ಹೆಸರು ಕೊಡುತ್ತಾರಾ? ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಅಧಿಕಾರಿ ಮೇಲೆ ಎತ್ತಿಹಾಕುತ್ತಿದ್ದಾರೆ ಎಂದು ಟೀಕಿಸಿದರು.

ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಮಾತನಾಡಿ, ಕೊರೊನಾ ಮೂರನೇ ಅಲೆ ಎದುರಿಸಲು ತಯಾರಿ ಮಾಡಿಕೊಳ್ಳಿ ಅಂತ ಸಿಎಂ ಹೇಳಿದ್ದಾರೆ, ಮೊದಲು ಸಿಎಂ ಕೊರೊನಾ ಎರಡನೇ ಅಲೆಯನ್ನ ನಿಯಂತ್ರಿಸಲಿ, ಮೂರನೇ ಕೊರೊನಾ ಅಲೆಗೆ ತಯಾರಿ ಮಾಡೋಣ, ಆದ್ರೆ ಈಗ ಸಾಯುತ್ತಿರುವ ಜನರನ್ನ ಬದುಕಿಸಿ ಅಂತಾ ಕಿಡಿಕಾರಿದ್ದಾರೆ.

ವ್ಯಾಕ್ಸಿನೇಷನ್​ಗೆ ನಾನು ಟ್ರೈ ಮಾಡ್ದೆ.. ಎಲ್ಲೂ ಸಿಕ್ತಿಲ್ಲ.. ಸಿಇಟಿ ಬೋರ್ಡ್ ಹಾಕಿದಂತೆ ವ್ಯಾಕ್ಸಿನೇಷನ್​ಗೂ ಬೋರ್ಡ್​ ಹಾಕಿ. ಇದರ ಜೊತೆಗೆ ಬೆಡ್, ಆಕ್ಸಿಜನ್ ಎಲ್ಲಿ ಸಿಗುತ್ತೆ ಅಂತ ಕೂಡ ಬೋರ್ಡ್ ಹಾಕಬೇಕು.. ಇದರಿಂದ ಜನರಿಗೆ ಅನುಕೂಲ ಆಗುತ್ತೆ.

ಶಿವಮೊಗ್ಗದಲ್ಲಿ ಒಬ್ಬ ಮಂತ್ರಿ (ಈಶ್ವರಪ್ಪ) ನಮ್ಮ ಬಳಿ ನೋಟ್ ಪ್ರಿಂಟಿಂಗ್ ಮಿಷನ್ ಇಲ್ಲ ಅಂತ ಹೇಳಿದ್ದಾರೆ. ಆದ್ರೆ ನೋಟ್ ಕೌಂಟಿಂಗ್ ಇಟ್ಕೊಂಡಿದಾರಲ್ಲ ನಮ್ ಮಂತ್ರಿಗಳು.. ಯಾಕ್ರೀ ಜನ್ರಿಗೆ ಹುಸಿ ನಂಬಿಕೆ ಹೇಳ್ತಿರಾ? ಕೊಡೋದಕ್ಕೆ ಆಗೋದಿಲ್ಲ ಅಂದ್ರೆ ಆಗೋದಿಲ್ಲ ಅಂತ ಹೇಳಿ. ಸರ್ಕಾರದ ಬಳಿ ದುಡ್ಡಿಲ್ಲ ಅಂತ ಹೇಳಿ. ಯಡಿಯೂರಪ್ಪನವರು ಸಾಲ ಮನ್ನಾ ಮಾಡೋದಕ್ಕೆ ನಮ್‌ ಹತ್ರ ಪ್ರಿಂಟಿಂಗ್ ಮಿಷನ್ ಇಲ್ಲ ಅಂತಾರೆ. ನೋವಿರೋದಕ್ಕೆ ತಾನೆ ಜನ ಕೇಳ್ತಿರೋದು..?

ರೈತರ ತರಕಾರಿ ಕೊಳ್ಳುವವರಿಲ್ಲ, ತೋಟಗಾರಿಕಾ ಸಚಿವರು, ಕೃಷಿ ಸಚಿವರು ರೈತರ ಹೊಲಗಳಿಗೆ ಭೇಟಿ ನೀಡಿದ್ದಾರಾ..? ಎಪಿಎಂಸಿ ಗಳಿಗೆ ಭೇಟಿ ನೀಡಿ ರೈತರ ಕಷ್ಟ ಅರಿತುಕೊಳ್ಳಲಿ. ಕಾರ್ಮಿಕರು, ಬೀದಿ ವ್ಯಾಪಾರಿಗಳು, ಬಡವರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಬಡವರ ಅಕೌಂಟ್ ಗೆ 10 ಸಾವಿರ ಹಣ ಹಾಕಿ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಿ ಎಂದರು.

RELATED TOPICS:
English summary :DKShivakumar

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...