Fri,Apr26,2024
ಕನ್ನಡ / English

ಚಂಡಮಾರುತ- ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಭಾರೀ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ | ಜನತಾ ನ್ಯೂಸ್

12 May 2021
1603

ಉತ್ತರ ಕನ್ನಡ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಅಬ್ಬರಿಸಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಲಕ್ಷದ್ವೀಪಗಳಲ್ಲಿ ಮೇ 14 ಹಾಗೂ 15ರಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಮೇ 16ರಂದು ಚಂಡಮಾರುತ ಪ್ರಭಾವ ಬೀರಲಿದೆ. ಆರಂಭದಲ್ಲಿ ಪಶ್ಚಿಮ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮೇ 16ರಂದು ಚಂಡಮಾರುತ ಬಂದು ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಮಳೆಯಾಗಲಿದೆ.

ಈ ಚಂಡಮಾರುತವನ್ನು ಟೌಕ್ಟೇ ಚಂಡಮಾರುತ ಅಂತಾ ಹೆಸರಿಸಲಾಗಿದೆ. ಇದು ಅರಬ್ಬೀ ಸಮುದ್ರದಲ್ಲಿ ಉಂಟಾದ ಅತ್ಯಂತ ಪ್ರಬಲ ಚಂಡಮಾರುತ ಅಂತಾ ಹೇಳಲಾಗಿದೆ.

ಮೇ 14 ರಂದು ಈ ಚಂಡಮಾರುತ ದಕ್ಷಿಣ ಕೇರಳದ ಕರಾವಳಿಗೆ ಅಪ್ಪಳಿಸಲಿದ್ದು, ಮೇ 15ನೇ ತಾರೀಖು ರಾಜ್ಯದ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ. ಮೇ 16ನೇ ತಾರೀಖಿನಂದು ಮಹಾರಾಷ್ಟ್ರದ ಕರಾವಳಿ ಮೂಲಕ ಗುಜರಾತ್ ಕರಾವಳಿಯನ್ನು ತಲುಪಲಿದೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಗಾಳಿಯ ವೇಗ ಗಂಟೆಗೆ 60-65 ಕಿ.ಮೀ ವೇಗದಲ್ಲಿ ಇರಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅರಬ್ಬಿ ಸಮುದ್ರದ ಪೂರ್ವ ಮಧ್ಯ ಭಾಗ ಹಾಗೂ ಕರ್ನಾಟಕದ ಕರಾವಳಿ ಉದ್ದಕ್ಕೂ ಮೇ 14ರಿಂದ ಸಮುದ್ರಕ್ಕೆ ಇಳಿಯಬಾರದು. ಅಲ್ಲದೆ ಮಹಾರಾಷ್ಟ್ರ ಹಾಗೂ ಗೋವಾ ತೀರಗಳಲ್ಲಿನ ಮೀನುಗಾರರು ಮೇ 15ರೊಳಗೆ ಸಮುದ್ರದಿಂದ ಹಿಂದಿರುಗಲು ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಸಮುದ್ರದಲ್ಲಿರುವ ಮೀನುಗಾರರು ಇಂದೇ ಮರಳುವಂತೆ ಸಹ ಹವಾಮಾನ ಇಲಾಖೆ ಎಚ್ಚರಿಸಿದೆ.

janata

RELATED TOPICS:
English summary :Cyclone

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...