Fri,Apr26,2024
ಕನ್ನಡ / English

ಡಬಲ್ ಇಂಜಿನ್ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿ ಸರಕಾರ ಕೆಟ್ಟು ನಿಂತಿದೆ: ಡಿ.ಕೆ.ಶಿವಕುಮಾರ್ | ಜನತಾ ನ್ಯೂಸ್

13 May 2021
916

ಬೆಂಗಳೂರು : ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರಗಳು ಡಬಲ್ ಇಂಜಿನ್ ರೀತಿಯಲ್ಲಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೊರೋನ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್‌ಗಳು ಕೆಟ್ಟು ನಿಂತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್​ವೈ ಚಾಲನೆ ನೀಡಿದರು. ಆಗ ಮುಖ್ಯಮಂತ್ರಿಗೆ ಎಷ್ಟು ಲಸಿಕೆ ಇದೆ ಎನ್ನುವುದು ಗೊತ್ತಿರಲಿಲ್ಲವಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಉಚಿತವಾಗಿ ಲಸಿಕೆ ನೀಡಲು ಸರ್ಕಾರಕ್ಕೆ ಆಗುವುದಿಲ್ವಾ. ಸರ್ಕಾರದಿಂದ ಆಗದಿದ್ದರೆ ನಾವೇ ವ್ಯವಸ್ಥೆ ಮಾಡುತ್ತೇವೆ. ಸರ್ಕಾರದ ಡಬಲ್ ಎಂಜಿನ್ ಈಗ ನಿಂತೋಗಿದೆ. ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಇವರ ಕೈಯಲ್ಲಿ ಯಾವುದೇ ಪ್ಲ್ಯಾನ್ ಇಲ್ಲದೆ ಸರ್ಕಾರ ನಡೆಸಲು ಆಗುತ್ತಿಲ್ಲ ಎಂದು ಹೇಳಿದರು.

ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಡಿಕೆಶಿ, 24 ರೋಗಿಗಳ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ. ನಿವೃತ್ತ ನ್ಯಾಯಮೂರ್ತಿಗಳು ಕೂಡ ಇದೇ ವರದಿ ಕೊಟ್ಟಿದ್ದಾರೆ. ಈ ಸಾವುಗಳಿಗೆ ಯಾರು ಹೊಣೆ ಹೊರುತ್ತಾರೆಂದು ನೀವೆ ನಿರ್ಧರಿಸಬೇಕು ಎಂದು ಹೇಳಿದರು.

ಲಸಿಕೆ ಉಚಿತವಾಗಿ ನೀಡುತ್ತೇವೆ ಎಂದರು. 18-44ರ ವಯೋಮಾನದವರಿಗೆ ಲಸಿಕೆ ಅಂತಾ ಮೇ 1ರಂದು ಉದ್ಘಾಟನೆಯನ್ನೂ ಮಾಡಿದರು. ಇವತ್ತು ಲಸಿಕೆ ಕೊಡಲು ಆಗಲ್ಲ ಎನ್ನುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಡಬಲ್ ಇಂಜಿನ್ ಸರಕಾರ ಬಹಳ ಚೆನ್ನಾಗಿ ಆಡಳಿತ ಮಾಡಲಿವೆ ಎಂದಿದ್ದರು. ಆದರೆ ಈ ಡಬಲ್ ಇಂಜಿನ್ ಗಳು ನಿಂತು ಹೋಗಿವೆ ಎಂದು ಕಿಡಿಕಾರಿದರು.

ಆಕ್ಸಿಜನ್ ಪೂರೈಸುವಂತೆ ಆದೇಶಿಸಿ ಹೈಕೋರ್ಟ್ ರಾಜ್ಯದ ಜನರಿಗೆ ನ್ಯಾಯ ಒದಗಿಸಿತ್ತು. ಆದರೆ ಕೇಂದ್ರ ಸರಕಾರ ಆಕ್ಸಿಜನ್ ಕಳುಹಿಸಿದೆ ಎಂದು ಇವರು ಶಹಬ್ಬಾಶ್ ಗಿರಿ ತೆಗೆದುಕೊಳ್ಳುತ್ತಿದ್ದಾರೆ. ಅವರು ಯಾರಿಗಾದರೂ ಶಹಬ್ಬಾಶ್ ಗಿರಿ ಕೊಡಲಿ, ಒಟ್ಟಾರೆ ಜನರ ಪ್ರಾಣ ಉಳಿಸಿದರೆ ಸಾಕು ಎಂದರು.

ಇನ್ನು ರೈತರ ಪರಿಸ್ಥಿತಿ ದೇವರಿಗೇ ಪ್ರೀತಿ. ರಸಗೊಬ್ಬರ ಬೆಲೆ ಕಡಿಮೆಯಾಗಲಿಲ್ಲ. ಲಾಕ್ ಡೌನ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 10 ಸಾವಿರ ರುಪಾಯಿ ನೆರವು ನೀಡಬೇಕು ಎಂಬುದು ನಮ್ಮ ಆಗ್ರಹ. ಗೊಬ್ಬರದ ಬೆಲೆ ಕಡಿಮೆ ಮಾಡಬೇಕು. ತರಕಾರಿ, ಹೂ ಬೆಳೆದು, ನಷ್ಟ ಆದವರಿಗೆ ಪರಿಹಾರ ಕೊಡಬೇಕು. ಸಾಂಪ್ರದಾಯಿಕ ವೃತ್ತಿ ಆಧರಿಸಿದವರಿಗೆ, ಜಿಮ್, ಸಿನಿಮಾ ತಂತ್ರಜ್ಞರಿಗೆ ನೆರವು ಸಿಗಬೇಕು. ನಿಮ್ಮಿಂದ ಇದನ್ನು ನಿಭಾಯಿಸಲು ಆಗುತ್ತಿಲ್ಲ. ಕೋವಿಡ್ ಪ್ರಕರಣದ ಸಂಖ್ಯೆ ಕಡಿಮೆ ಮಾಡಲು ಪರೀಕ್ಷೆ ನಡೆಸುವುದನ್ನೇ ಕಡಿಮೆ ಮಾಡಿದ್ದೀರಿ ಎಂದರು.

RELATED TOPICS:
English summary :DKShivakumar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...