Fri,Apr26,2024
ಕನ್ನಡ / English

ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು! | ಜನತಾ ನ್ಯೂಸ್

14 May 2021
1165

ಬೆಂಗಳೂರು : ನಾವೇನ್‌ ನೋಟ್‌ ಪ್ರಿಂಟ್‌ ಮಾಡ್ತೀವಾ?, ಜಡ್ಜ್‌ಗಳು ಸರ್ವಜ್ಞರಲ್ಲ. ಕೊರೊನಾ ವೈರಸ್‌ಗಾಗಿ ಚೀನಾವನ್ನು ದೂಷಿಸಬೇಕು, ನೇಣು ಹಾಕಿಕೊಳ್ಳಲು ಆಗುತ್ತಾ?, ಕೋವಿಡ್‌ ಪ್ಯಾಕೇಜ್‌ ಕೊಡಲು ಆಗಲ್ಲ, ದೇಶದ ದುಸ್ಥಿತಿಗೆ ವಿರೋಧ ಪಕ್ಷಗಳು ಕಾರಣ.. ಧರೆಗೆ ಸ್ವರ್ಗ ಇಳಿಸುವ ಭರವಸೆಯೊಂದಿಗೆ ಅಧಿಕಾರ ಹಿಡಿದ ಬಿಜೆಪಿಯ ಅಸಮರ್ಥರ ಕೈಲಾಗದ ಮಾತುಗಳಿವು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಟ್ವಿಟರ್​ನಲ್ಲಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿರುವ ಅವರು, ಅಷ್ಟು ವರ್ಷ ಅಧಿಕಾರ ಅವರು ಮಾಡಿದರು, ಇವರು ಅಷ್ಟು ವರ್ಷ ತಿಂದರು, ಎಂದು ದೂಷಿಸಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹೊಣೆಗೇಡಿತನ ಪ್ರದರ್ಶಿಸುತ್ತಿದೆ. ಪ್ರತಿಯೊಂದಕ್ಕೂ ವಿರೋಧ ಪಕ್ಷಗಳನ್ನು ದೂಷಿಸುವ ಬಿಜೆಪಿಗೆ ಅಧಿಕಾರವೇಕೆ? ಕೊಟ್ಟ ಕುದುರೆಯನ್ನು ಏರಲಾಗದವನು ಧೀರನೂ ಅಲ್ಲ, ಶೂರನೂ ಅಲ್ಲ, ಎಂಬ ಮಾತು ಬಿಜೆಪಿಗೆ ಹೊಂದುವಂಥದ್ದು ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಕೋವಿಡ್‌ ನಿಭಾಯಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ. ಅತಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮುಂದಿದೆ. ಕೇಂದ್ರ ಕೋವಿಡ್‌ ಅನ್ನು ಅಸಮರ್ಪಕವಾಗಿ ನಿರ್ವಹಿಸಿದ್ದೇ ಇದಕ್ಕೆ ಕಾರಣ. ಅತಿ ಹೆಚ್ಚು ಸೋಂಕು ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮುಂದಿದೆ. ಇದು ರಾಜ್ಯ ಸರ್ಕಾರದ ಅಸಮರ್ಥತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಸಮರ್ಥತೆ ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಈಗ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕೈಲಾಗದ ಮಾತಾಡುತ್ತಿದ್ದಾರೆ. ವಿರೋಧ ಪಕ್ಷಗಳನ್ನು ಟೀಕಿಸುತ್ತಿದ್ದಾರೆ. ಭೂ ಕೈಲಾಸ ಸೃಷ್ಟಿಸುವ ಬಿಜೆಪಿ ಮಾತು ನಂಬಿ ಜನ ಅಧಿಕಾರ ನೀಡಿದ್ದಾರೆ. ಜನರ ಆಶಯಕ್ಕೆ ತಕ್ಕಂತೆ ಬಿಜೆಪಿ ನಡೆದುಕೊಳ್ಳಬೇಕು. ಕೈಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿದ್ದಾರೆ.

ಪರಸ್ಪರ ಗೂಬೆ ಕೂರಿಸುವುದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಖಯಾಲಿ. ಇದನ್ನು ಅರಿತೇ ಜನ ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕೋವಿಡ್‌ ನಿಭಾಯಿಸುವಲ್ಲಿ ಪ್ರಾದೇಶಿಕ ಪಕ್ಷಗಳ ಸರ್ಕಾರವಿರುವ ರಾಜ್ಯಗಳು ಯಶಸ್ವಿಯಾಗಿವೆ. ಜನರಿಗೆ ಸವಲತ್ತು ನೀಡುತ್ತಿವೆ. ಆದರೆ, ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿರುವೆಡೆ ಅಂತಹ ಬದ್ಧತೆ ಕಾಣುತ್ತಿಲ್ಲ ಎಂದಿದ್ದಾರೆ.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...