Thu,May09,2024
ಕನ್ನಡ / English

ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ! | ಜನತಾ ನ್ಯೂಸ್

14 May 2021
1365

ಬೆಂಗಳೂರು : ಜನರಿಗೆ ಉಚಿತ ಲಸಿಕೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ ಬಿಜೆಪಿ ತಿರುಗೇಟು ನೀಡಿದೆ.

ಉಚಿತ ಲಸಿಕೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ ಡಿಕೆ ಶಿವಕುಮಾರ್ ಅವರೇ, ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.

ಸಂಕಷ್ಟದ ಸಮಯದಲ್ಲಿಬಿಟ್ಟಿ ಸಲಹೆ ನೀಡುವುದು, ಜನರ ದಾರಿ ತಪ್ಪಿಸುವುದು. ಇದು ಕಾಂಗ್ರೆಸ್ ಜನರಿಗೆ ಮಾಡುತ್ತಿರುವ ದ್ರೋಹ. ಭ್ರಷ್ಟಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ನಿಮಗೆ ನಿಜಕ್ಕೂ ಸಹಾಯ ಮಾಡುವ ಮನಸಿದ್ದರೆ ಪೊಳ್ಳು ಆರೋಪ ಮಾಡುವುದನ್ನು ಬಿಟ್ಟು ಒಂದಿಷ್ಟು ಸುಮ್ಮನಿದ್ದು ಬಿಡಿ ಎಂದು ಸಲಹೆ ನೀಡಿದೆ.

ಸರ್ಕಾರಕ್ಕೆ ಸವಾಲೆಸೆಯುವ ನೀವು, ರಾಜೀವ್ ಗಾಂಧಿ ಫೌಂಡೇಶನ್ ಖಾತೆಯಲ್ಲಿ ಲಕ್ಷಾಂತರ ಕೋಟಿ ಹಣ ಕೊಳೆಯುತ್ತಿದೆ. ನಿಮ್ಮ ಆದಾಯ ಮೀರಿದ ಆಸ್ತಿಯ ತನಿಖೆ ನಡೆಯುತ್ತಿದೆ. ಇದ್ಯಾವುದೂ ನ್ಯಾಯ ಮಾರ್ಗದ ಗಳಿಕೆಯಲ್ಲ. ಸಹಾಯದ ಹೆಸರಿನಲ್ಲೂ ಕಪ್ಪು ಬಿಳುಪು ದಂಧೆಗೆ ಇಳಿದಿದ್ದೀರಾ?, ಉಚಿತ ಲಸಿಕೆಗೆ ನಾವು ಸಹಾಯ ಮಾಡುತ್ತೇವೆ ಎಂದು ನೀವು ಹೇಳಿದಾಗಲೇ ಅತ್ತೆಯ ದುಡ್ಡನ್ನು ಅಳಿಯನಿಗೆ ದಾನ ಮಾಡುವ ಚಿಲ್ಲರೆ ಯೋಜನೆ ರೂಪಿಸುತ್ತಿರಬಹುದೆಂಬ ಶಂಕೆಯಿತ್ತು. ಈಗ 100 ಕೋಟಿ ನೀಡುವ ಘೋಷಣೆ ಮಾಡಿದ್ದಾರೆ. ಇದು ಜನರ ದಾರಿ ತಪ್ಪಿಸುವ ಕಾಂಗ್ರೆಸ್​ನ ಮತ್ತೊಂದು ಯೋಜನೆಯಷ್ಟೇ ಎಂದು ಬಿಜೆಪಿ ಕಿಡಿಕಾರಿದೆ.

ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡೋದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟಿ ಸಹಾಯ ನೀಡೋದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

RELATED TOPICS:
English summary :BJP

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...