ಕ್ಷಮೆ ಕೇಳಲಿ ಎಂದ ರೋಹಿಣಿ ಸಿಂಧೂರಿಗೆ ಪ್ರಶ್ನೆಗಳ ಸುರಿಮಳೆಗೈದ ಶಾಸಕ ಸಾರಾ ಮಹೇಶ್! | ಜನತಾ ನ್ಯೂಸ್

16 May 2021
441
Mysuru

ಮೈಸೂರು : ನನ್ನ ಮೇಲೆ ಆರೋಪ ಮಾಡಿದವರು ಕ್ಷಮೆ ಕೇಳಬೇಕು ಎಂದು ರೋಹಿಣಿ ಸಿಂಧೂರಿ ನಿನ್ನೆ ಹೇಳಿಕೆ ನೀಡಿದ್ದ ಹಿನ್ನೆಲೆ ಸಾ.ರಾ ಮಹೇಶ್​​ ಡಿ.ಸಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್​, ಒಬ್ಬ ಕನ್ನಡಿಗ ದಲಿತ ಡಿಸಿಯನ್ನು 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳಾ? ನಿಮ್ಮ ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ ತೀರ್ಪು ಬಂತು. ಈಗ ಅದರ ತೀರ್ಪು ಬರದಂತೆ ಸಿಎಟಿ ಮ್ಯಾನೇಜ್ ಮಾಡಿದ್ದು ಸುಳ್ಳ? ಎಂದು ಕೇಳಿದರು. ವಾಲ್ಮೀಕಿ ಜಯಂತಿ ಆಚರಣೆಗೆ ಬರಲಿಲ್ಲ. ಬದಲಾಗಿ ಬಂಡೀಪುರಕ್ಕೆ ಹೋಗಿದ್ದು ಸುಳ್ಳಾ? ಎಂದು ಪ್ರಶ್ನೆ ಮಾಡಿದರು.

ಮಾತ್ರೆ ಕೊಡಲು ದುಡ್ಡಿಲ್ಲ. ಕರೊನಾ ಸಂದರ್ಭದಲ್ಲಿ ಇನ್ ಡೋರ್ ಜಿಮ್, ಸ್ವಿಮ್ಮಿಂಗ್ ಪೂಲ್ ಕಟ್ಟಿಸಿರುವುದು ಸುಳ್ಳಾ? ಅದು ಪಾರಂಪರಿಕ ಕಟ್ಟಡದಲ್ಲಿ ಈಜುಕೊಳಕ್ಕೆ ಅನುಮತಿ ಕೊಟ್ಟವರು ಯಾರು? ಇದಕ್ಕೆ ಹಣ ಎಲ್ಲಿಂದ ಬಂತು? ಅದು ಕಟ್ಟಿರೋದು ಸುಳ್ಳಾ?

ರಾಜ್ಯದ ಸಿಎಂ ಮತ್ತು ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ? ರಾಜ್ಯ ಮುಖ್ಯ ಕಾರ್ಯದರ್ಶಿ ಮನೆಯಲ್ಲಿ ಇದೆಯಾ? ನಾವು-ನೀವು ಜನರಿಗೆ ಮಾದರಿಯಾಗಿರಬೇಕು ಎಂದು ಸಲಹೆ ನೀಡಿದರು.

ಕರ್ನಾಟಕದ ಹಣ ತಿರುಪತಿಗೆ ಕೊಟ್ಟಿದ್ದು ಸುಳ್ಳಾ? ಐಎಎಸ್ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯ ಹೊತ್ತಿ ಉರಿದಿದ್ದು ಸುಳ್ಳಾ? ಈಜುಕೊಳದ 50 ಲಕ್ಷ ರೂ. ಕರೊನಾಗೆ ಬಳಸಬೇಕಿತ್ತು.

ನಿಮ್ಮನ್ನು ಯಾರೂ ಪ್ರಶ್ನೆ ಮಾಡಲೇಬಾರದ? ಇಂತಹ ಪರಿಸ್ಥಿತಿಯಲ್ಲೂ ಮೈಸೂರಿನಲ್ಲಿ ಶಾಸಕರು, ಪಾಲಿಕೆ ಸದಸ್ಯರು ಕೆಲಸ ಮಾಡುತ್ತಿರುವುದಕ್ಕೆ ಕೇಳಬೇಕಾ? ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ ಎಂದು ಸವಾಲು ಎಸೆದರು.

ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ. ಇದೆಲ್ಲಾ ಏನೇ ಇರಲಿ ನೊಂದವರ ನಿಟ್ಟುಸಿರು ತಟ್ಟದೆ ಬಿಡುವುದಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ದ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

ಇದೇ ವೇಳೆ ಸಾಂಕ್ರಾಮಿಕ ಹೆಚ್ಚಳವಾಗ್ತಿರೊ ಬಗ್ಗೆ ಮಾತನಾಡಿದ ಮಹೇಶ್​, ತಜ್ಞರು-ಮಾಧ್ಯಮಗಳ ವರದಿಯಂತೆ ಈಗಾಗಲೇ ಮೂರನೇ ಅಲೆ ಶುರುವಾಗಿದೆ. ಲಾಕ್‌ಡೌನ್‌ನಿಂದ ಈಗಾಗಲೇ ಶ್ರಮಿಕ ವರ್ಗ ತುಂಬಾ ನೊಂದಿದೆ. ಹೋರಾಟದಿಂದ ಬಂದಿರುವ ಸಿಎಂ ಆರ್ಥಿಕವಾಗಿ ಸಹಾಯ ಮಾಡಬೇಕು. ಆರ್ಥಿಕ ಸಂಕಷ್ಟ ಇರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕಳೆದ ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಇದಕ್ಕಾಗಿ ಎಲ್ಲಾ ಶಾಸಕರು, ಪರಿಷತ್ ಸದಸ್ಯರ ಒಂದು ವರ್ಷದ ವೇತನ ಬಳಸಿಕೊಳ್ಳಿ ಎಂದರು.

RELATED TOPICS:
English summary :Mysuru

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ನ್ಯೂಸ್ MORE NEWS...