Fri,Apr19,2024
ಕನ್ನಡ / English

ಜನಸೇವೆಗೆ ಅನುಮತಿ ನೀಡಲಿ, ನಾವು ಕೈಜೋಡಿಸುತ್ತೇವೆ: ಡಿ.ಕೆ ಶಿವಕುಮಾರ್ | ಜನತಾ ನ್ಯೂಸ್

17 May 2021
1448

ಬೆಂಗಳೂರು : ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಲಸಿಕೆಗೆ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ.

ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಶಾಸಕರ ನಿಧಿ 2 ಕೋಟಿ ರುಪಾಯಿಯಲ್ಲಿ ಶೇ.25 ರಷ್ಟು ಅನುದಾನ ಬಳಸಿಕೊಳ್ಳಲು ಸರ್ಕಾರ ಹೇಳಿದೆ. ಹಾಸಿಗೆ, ವೆಂಟಿಲೇಟರ್ ಖರೀದಿಗೆ ಬಳಸಲು ಅನುಮತಿ ಇದೆ. ಹೀಗಾಗಿ ನಾವು 100 ಕೋಟಿ ಮೊತ್ತದ ಕಾರ್ಯಕ್ರಮ ರೂಪಿಸಿ, ಸರ್ಕಾರದ ಅನುಮತಿ ಕೋರಿದ್ದೇವೆ.

ನಮ್ಮಲ್ಲಿ ಒಟ್ಟು 93 ಶಾಸಕರು ಹಾಗೂ ಪರಿಷತ್ ಸದಸ್ಯರಿದ್ದು, ಉಳಿದ ಮೊತ್ತವನ್ನು ನಮ್ಮ ಕಾರ್ಯಕರ್ತರ ಬಳಿ ಭಿಕ್ಷೆ ಎತ್ತಾದರೂ ಸಂಗ್ರಹಿಸುತ್ತೇವೆ. ಈ ಜನಪರ ಕೆಲಸಕ್ಕೆ ಸರ್ಕಾರ ಅನುಮತಿ ನೀಡಲಿ. ನಾವು ಕೂಡ ಸರ್ಕಾರದ ಜತೆ ಕೈ ಜೋಡಿಸಿ ಜನ ಸೇವೆ ಮಾಡುತ್ತೇವೆ ಎಂದು ತಿಳಿಸಿದರು.

RELATED TOPICS:
English summary :DKShivakumar

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...