ಕೊರೊನಾ ನಿಯಂತ್ರಣಕ್ಕೆ 1 ತಿಂಗಳು ಲಾಕ್‍ಡೌನ್ ಮಾಡಿ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಹೆಚ್​ಡಿಕೆ ಒತ್ತಾಯ! | ಜನತಾ ನ್ಯೂಸ್

18 May 2021
494
HD Kumaraswamy

ಬೆಂಗಳೂರು : ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಅನಿವಾರ್ಯ. ಒಂದು ತಿಂಗಳ ಕಾಲ ಲಾಕ್​ಡೌನ್​ ವಿಸ್ತರಿಸಿ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಲಾಕ್‍ಡೌನ್‍ನಿಂದ ಕೊರೊನಾ ನಿಯಂತ್ರಣ ಆಗುತ್ತಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ನಾನು ನಮ್ಮ ಶಾಸಕರಿಂದ ಮಾಹಿತಿ ಪಡೆದಿದ್ದು ಇದು ಸುಳ್ಳು. ಸರ್ಕಾರ ಕೊರೊನಾ ಪರೀಕ್ಷೆಯನ್ನು ಕಡಿಮೆ ಮಾಡಿದೆ. ಹೀಗಾಗಿ ಕೊರೊನಾ ಕೇಸ್‍ಗಳು ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಮೇ 24 ರ ಬಳಿಕ ಲಾಕ್​ಡೌನ್​ ವಿಸ್ತರಣೆ ಮಾಡುವುದು ಅನಿವಾರ್ಯ. ಲಾಕ್​ಡೌನ್​ ವಿಸ್ತರಿಸದಿದ್ದರೆ ದೊಡ್ಡ ದೊಡ್ಡ ಅನಾಹುತ ಆಗಲಿದೆ. ಹೀಗಾಗಿ ಲಾಕ್​ಡೌನ್​ ವಿಸ್ತರಿಸುವುದು ಸೂಕ್ತ, ಇದರ ಜೊತೆಗೆ ಸರ್ಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಲಹೆ ನೀಡಿದರು.

ರಾಜ್ಯದ ಜನರ ಜೀವದ ಜೊತೆ ಆಟ ಆಡಬೇಡಿ. ಲಾಕ್ ಡೌನ್​ ವಿಸ್ತರಣೆ ಮಾಡದೆ ಇದ್ದರೆ ಮುಂದೆ ದೊಡ್ಡ ಅನಾಹುತ ಆಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ ಹೆಚ್​ಡಿಕೆ,
ಸರ್ಕಾರ ಕೋವಿಡ್ ಟೆಸ್ಟ್ಅನ್ನು ಹಲವು ಕಡೆ ಸ್ಥಗಿತಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಮತ್ತಷ್ಟು ಸಾವು ನೋವು ಸಂಭವಿಸುತ್ತದೆ. ಹೊರ ನೋಟಕ್ಕೆ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳಲು ಹೊರಟಿದೆ. ತಾತ್ಕಾಲಿಕವಾಗಿ ಜನರ ದಿಕ್ಕು ತಪ್ಪಿಸಲು ಹೋಗಿ ಮುಂದೆ ದೊಡ್ಡ ಎಡವಟ್ಟು ಮಾಡುತ್ತಿರಾ?, ಇದರಿಂದ ರಾಜ್ಯದಲ್ಲಿ ಕೋವಿಡ್ ಕೇಸ್ ಗಳು ಹೆಚ್ಚಾಗುತ್ತವೆ ಎಂದು ಮುನ್ನೆಚ್ಚರಿಕೆ ನೀಡಿದರು.

ಕರ್ನಾಟಕದ ಸಮಸ್ಯೆಗೆ ಸಂಸದರು ಕೆಲಸ ಮಾಡಬೇಕು. ಕೇಂದ್ರ ನಮ್ಮನ್ನ ಮಲತಾಯಿ ಧೋರಣೆ ತೋರಿಸುತ್ತಿದ್ದಾರೆ. ನಮ್ಮ ಸಂಸದರಿಗೆ ಪ್ರತಿಭಟನೆ ಮಾಡುವ ಧೈರ್ಯವಿಲ್ಲ. ರಾಜ್ಯದ ಪರ ಸಂಸದರು ಧ್ವನಿ ಎತ್ತಬೇಕು. ಮೋದಿ ಅವರಿಗೆ ಎಷ್ಟು ಜನ ಮಂತ್ರಿ ಇದ್ದಾರೆ ಅಂತ ಗೊತ್ತಿಲ್ಲ. ಅನೇಕ ಕೇಂದ್ರ ಸಚಿವರೇ ಕಾಣೆಯಾಗಿದ್ದಾರೆ. ರಾಜ್ಯಕ್ಕಾಗಿ ನಮ್ಮ ಸಂಸದರು ಪ್ರತಿಭಟನೆ ಮಾಡಿ ನಮ್ಮ ರಾಜ್ಯದ ಪರ ಕೆಲಸ ಮಾಡಬೇಕು ಎಂದು ಹೇಳಿ ಸಂಸದರ ನಡೆಯನ್ನು ಟೀಕಿಸಿದರು.

RELATED TOPICS:
English summary :HD Kumaraswamy

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...