Thu,Apr25,2024
ಕನ್ನಡ / English

ಇದು ಅವೈಜ್ಞಾನಿಕ, ಅಸಮರ್ಪಕ ಪ್ಯಾಕೇಜ್, ಪ್ಯಾಕೇಜ್‌ ಹೆಸರಿನಲ್ಲಿ ಜನರಿಗೆ ಟೋಪಿ: ಎಚ್‌.ಡಿ. ಕುಮಾರಸ್ವಾಮಿ | ಜನತಾ ನ್ಯೂಸ್

19 May 2021
970

ಬೆಂಗಳೂರು : ಕೋವಿಡ್‌ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ರಾಜ್ಯ ಸರ್ಕಾರದ ಘೋಷಿಸಿರುವ ಪ್ಯಾಕೇಜ್‌ ಸಮರ್ಪಕವಾಗಿಲ್ಲ. ಪ್ಯಾಕೇಜ್‌ ಹೆಸರಿನಲ್ಲಿ ಜನರಿಗೆ ಟೋಪಿ ಹಾಕುವ ಕೆಲಸ ನಡೆಯುತ್ತಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ರೂ. ಪ್ಯಾಕೇಜ್‌ಅನ್ನೂ ಘೋಷಿಸಲಾಯಿತು ಎಂದು ಅವರು ಹೇಳಿದ್ದಾರೆ. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ರೂ. ಪರಿಹಾರ ಸಾಕೆ? ಎಂದಿದ್ದಾರೆ.

ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. ಕೇವಲ 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕಳೆದ ವರ್ಷವೂ ₹ 1,200 ಕೋಟಿ ಪ್ಯಾಕೇಜ್‌ ಘೋಷಿಸಲಾಗಿತ್ತು. ಆದರೆ, ಸರಿಯಾಗಿ ಅನುಷ್ಠಾನಕ್ಕೆ ತಂದಿರಲಿಲ್ಲ. ಈ ಬಾರಿಯೂ ₹ 1,200 ಕೋಟಿ ಮೊತ್ತದ ಪ್ಯಾಕೇಜ್‌ ಘೋಷಿಸಲಾಗಿದೆ. ರಾಜ್ಯದಲ್ಲಿ 55 ಲಕ್ಷ ಶ್ರಮಿಕ ಕುಟುಂಬಗಳಿವೆ. ಆದರೆ, ಅತ್ಯಲ್ಪ ಪ್ರಮಾಣದ ಜನರಿಗೆ ನೆರವು ಘೋಷಿಸಲಾಗಿದೆ. ಯಾವ ಆಧಾರದಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಳೆದ ವರ್ಷ 7.5 ಲಕ್ಷ ಆಟೊ ಚಾಲಕರಿಗೆ ನೆರವು ಘೋಷಿಸಲಾಗಿತ್ತು. ಈ ಬಾರಿ 2.10 ಲಕ್ಷ ಚಾಲಕರಿಗೆ ಮಾತ್ರ ನೆರವು ಪ್ರಕಟಿಸಲಾಗಿದೆ. ನೆರವಿನ ಮೊತ್ತವನ್ನು ₹ 5,000ದಿಂದ ₹ 3,000ಕ್ಕೆ ಇಳಿಕೆ ಮಾಡಲಾಗಿದೆ. ಹೂವು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ನೀಡುತ್ತಿದ್ದ ಪರಿಹಾರವನ್ನು ₹ 25,000ದಿಂದ ₹ 10,000ಕ್ಕೆ ತಗ್ಗಿಸಲಾಗಿದೆ. ಈ ಪ್ಯಾಕೇಜ್‌ನಿಂದ ಯಾರಿಗೂ ಒಳಿತಾಗುವುದಿಲ್ಲ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಪ್ಯಾಕೇಜ್ ಬಗ್ಗೆ ಸರಣಿ ಟ್ವೀಟ್ ನಲ್ಲಿ ಅಸಮಧಾನ ವ್ಯಕ್ತ ಪಡಿಸಿರುವ ಎಚ್ ಡಿ ಕೆ, ಜನಹಿತದ ಲಾಕ್‌ ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದಿದ್ದಾರೆ.

ಮಾತ್ರವಲ್ಲದೇ, ವಾಲಕ ವರ್ಗದವರಿಗೆ ನೀಡಿದ ಪ್ಯಾಕೇಜ್ ಬಗ್ಗೆ ಪ್ರತಿಕ್ರಿಯಿಸಿದ ಅವರು, 2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ ಟಿ ಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು, ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ ಎಂದು ಕಿಡಿ ಕಾರಿದ್ದಾರೆ.

RELATED TOPICS:
English summary :HD Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...