ಕಳೆದ ಬಾರಿಯ ಪ್ಯಾಕೇಜ್​ ಅನುದಾನವೇ ಜನರ ಕೈ ಸೇರಿಲ್ಲ, ಈ ಬಾರಿ ಹಣ ಕೊಡುತ್ತಾರೆಂಬ ನಂಬಿಕೆ ಇಲ್ಲ! | ಜನತಾ ನ್ಯೂಸ್

19 May 2021
410
Siddaramaiah

ಬೆಂಗಳೂರು : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್​ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ವಿಶೇಷ ಆರ್ಥಿಕ ಪ್ಯಾಕೇಜ್ ಕುರಿತು ಸುದ್ದಿಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸರ್ಕಾರದ ಖಜಾನೆಯಲ್ಲಿರೋದು ಕಾರ್ಮಿಕರ ಹಣ. ಕಳೆದ ಬಾರಿಯ ಪ್ಯಾಕೇಜ್​ ಅನುದಾನವೇ ಜನರ ಕೈ ಸೇರಿಲ್ಲ. ಇನ್ನು ಈ ಬಾರಿಯ ಪ್ಯಾಕೇಜ್​ ಹಣ ಕೊಡುತ್ತಾರೆ ಎಂಬ ನಂಬಿಕೆ ನಮಗಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಘೋಷಿಸಿದ ಪ್ಯಾಕೇಜ್ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ 1,250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಘೋಷಣೆಯಾಗಿದೆ. ಆದರೆ ವಾಸ್ತವಿಕವಾಗಿ 1,111.82 ಕೋಟಿ ಪ್ಯಾಕೇಜ್ ಆಗಿದೆ. ರೈತರ ಸಾಲ ಮರುಪಾವತಿ ಮುಂದೂಡಿರುವುದಾಗಿ ಹೇಳಿದ್ದಾರೆ. ಇದರಿಂದ ಯಾವುದೇ ಉಪಯೋಗವಿಲ್ಲ. ಕಟ್ಟಡ ಕಾರ್ಮಿಕರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಸರ್ಕಾರದಿಂದ ಒಂದೇ ಒಂದು ರೂಪಾಯಿ ಹೋಗಲ್ಲ. ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣ ಹೋಗುತ್ತದೆ. ಈ ಎಲ್ಲ ಹಣ ತೆಗೆದರೆ ಉಳಿಯೋದು 628 ಕೋಟಿ 38 ಲಕ್ಷ ಎಂದು ಹೇಳಿದರು.

ಕಳೆದ ಬಾರಿ ಘೋಷಿಸಿದ ಪ್ಯಾಕೇಜ್ ಹಣವೇ ಕೊಟ್ಟಿಲ್ಲ, ಈ ಬಾರಿ ಹಣ ಕೊಡುತ್ತಾರೆಂಬ ನಂಬಿಕೆ ಇಲ್ಲ ಎಂದು ಮಾತನಾಡಿದ ಸಿದ್ದರಾಮಯ್ಯ, ಕಳೆದ ಬಾರಿ 7 ಲಕ್ಷ 75 ಸಾವಿರ ಚಾಲಕರಿಗೆ ಹಣ ಘೋಷಣೆಯಾಗಿತ್ತು. ಆದರೆ ಕೊಟ್ಟಿರುವುದು ಕೇವಲ 2 ಲಕ್ಷ 10 ಚಾಲಕರಿಗೆ ಮಾತ್ರ. ಈ ಬಾರಿ ಮತ್ತೆ 3 ಸಾವಿರ ಘೋಷಣೆ ಮಾಡಿದ್ದಾರೆ. ಇದನ್ನು ಈಗ ಮತ್ತೆ ಕೊಡುತ್ತಾರೆಂಬ ನಂಬಿಕೆ ಇಲ್ಲ. ಇದೊಂದು ಅವೈಜ್ಞಾನಿಕ ಪ್ಯಾಕೇಜ್ ಎಂದು ಹೇಳಿದರು.

ನಾನು ಲಾಕ್​ಡೌನ್​ ಮಾಡಿ 10 ಕೆಜಿ ಅಕ್ಕಿ ನೀಡಿ ಎಂದಿದ್ದೆ. ಬಡ ಕುಟುಂಬಗಳಿಗೆ 3 ಸಾವಿರ ರೂ. ನೀಡುವಂತೆ ಹೇಳಿದ್ದೆ. ನಾವು ಹಲವು ಬಾರಿ ಒತ್ತಾಯ ಮಾಡಿದ್ದಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಅದನ್ನು ಕೊಡುತ್ತಾರೆಂಬ ನಂಬಿಕೆ ನಮಗೆ ಇಲ್ಲ ಎಂದು ಹೇಳಿದ ಸಿದ್ದರಾಮಯ್ಯ ರಾಜ್ಯದಲ್ಲಿ ಸಂಪೂರ್ಣ ಲಾಕ್​ಡೌನ್​ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಜೊತೆಗೆ ಲಾಕ್​ಡೌನ್​ ವೇಳೆ ಬಡ ಕುಟುಂಬಗಳಿಗೆ ಆಹಾರ ಪದಾರ್ಥ, 10 ಸಾವಿರ ರೂಪಾಯಿ ಹಣವನ್ನು ನೀಡುವಂತೆ ಒತ್ತಾಯಿಸಿದರು.

ರಾಜ್ಯದಲ್ಲಿ ಈಗ ಕೊವಿಡ್ ಟೆಸ್ಟ್ ಕಡಿಮೆ ಮಾಡಿದ್ದಾರೆ. ರಾಜ್ಯದಲ್ಲಿ ಕೊವಿಡ್ ಟೆಸ್ಟ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ರಾಜ್ಯದ 2 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ 55 ರಷ್ಟಾಗಿದೆ. ರಾಜ್ಯದಲ್ಲಿ ಕೊರೊನಾ ಕಂಟ್ರೋಲ್​ಗೆ ಬಂದಿದೆ ಎನ್ನುತ್ತಾರೆ. ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಬರಬೇಕು. ಆಗ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ಅರ್ಥ. ಕೊವಿಡ್ ಸಾವಿನ ಲೆಕ್ಕವನ್ನು ಕೂಡ ತಪ್ಪು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ಸತ್ಯವನ್ನು ಮುಚ್ಚಿಡುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

RELATED TOPICS:
English summary :Siddaramaiah

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...