Sat,Apr27,2024
ಕನ್ನಡ / English

ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ನಮಗೇ ಸಿಗಬೇಕು | ಜನತಾ ನ್ಯೂಸ್

19 May 2021
2228

ಬೆಂಗಳೂರು : ರಾಜ್ಯದಲ್ಲಿ ಉತ್ಪಾದನೆ ಆಗುವ ವೈದ್ಯಕೀಯ ಆಮ್ಲಜನಕವನ್ನು ರಾಜ್ಯದಲ್ಲೇ ಬಳಕೆ ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು ಅಧಿಕೃತ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಸಚಿವ ಜಗದೀಶ್‌ ಶೆಟ್ಟರ್‌ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರಾದ ಪಿಯೂಷ್‌ ಗೋಯಲ್‌, ಪ್ರಹ್ಲಾದ್‌ ಜೋಶಿ ಹಾಗೂ ಸದಾನಂದಗೌಡ ಅವರೊಂದಿಗೆ ಹಲವಾರು ಹಂತದಲ್ಲಿ ಮಾತುಕತೆಯನ್ನು ನಡೆದಿದ್ದೆವು. ಅಲ್ಲದೆ, ಹಲವಾರು ಪತ್ರಗಳನ್ನು ಬರೆಯಲಾಗಿತ್ತು. ಈ ಮಾತುಕತೆ ಮತ್ತು ಸಮಾಲೋಚನೆಗೆ ಫಲ ದೊರೆತಿದೆ. ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ತಾತ್ವಿಕ ಒಪ್ಪಿಗೆಯನ್ನು ನೀಡಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಿದರು.

ಆಕ್ಸಿಜನ್ ಸಪ್ಲೈ ಬಗ್ಗೆ ಸಿಎಂ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅಧಿಕಾರಿಗಳ ಜೊತೆಗೆ ಹಲವಾರು ಸಭೆ ಮಾಡಿದ್ದೇವೆ. ಕೈಗಾರಿಕಾ ಇಲಾಖೆ ಅಧಿಕಾರಿಗಳ ಜೊತೆಗೂ ಸಭೆ ನಡೆಸಲಾಯಿತು. ಆಕ್ಸಿಜನ್ ಸಪ್ಲೈ ಮಾನಿಟರಿಂಗ್ ಮಾಡಿದ್ದೇವೆ. ಪ್ರತಿ ಜಿಲ್ಲೆಗೆ ಪ್ರತಿದಿನ ಆಕ್ಸಿಜನ್ ಸಪ್ಲೈ ಮಾಡುತ್ತಿದ್ದೇವೆ ಎಂದರು.

ಕೇಂದ್ರದ ಸಹಾಯ ಕೂಡ ಪಡೆಯುತ್ತಿದ್ದೇವೆ. 1200ರಿಂದ 1400 ಮೆಟ್ರಿಕ್ ಟನ್ ಆಕ್ಸಿಜನ್​ಗೆ ಬೇಡಿಕೆ ಇದೆ. ಹೀಗಾಗಿ ಕೇಂದ್ರ ಸಚಿವರಾದ ಸದಾನಂದ ಗೌಡ ಮತ್ತು ಪ್ರಹ್ಲಾದ ಜೋಷಿ ಅವರ ಬಳಿ ಮಾತನಾಡುತ್ತೇವೆ. 1700 ಮೆಟ್ರಿಕ್ ಟನ್ ಬೇಕು. ರಾಜ್ಯದಲ್ಲಿ 1100 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಆಗುತ್ತೆ. ಅದನ್ನ ಗೋವಾ, ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಕಡೆ ಸಪ್ಲೈ ಮಾಡುತ್ತೇವೆ. ಆದ್ರೆ ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮ ರಾಜ್ಯಕ್ಕೆ ಸಿಗಬೇಕು ಎಂದು ಹೇಳಿದರು.

ರಾಜ್ಯಕ್ಕೆ 1400 ರಿಂದ 1700 ಮೆಟ್ರಿಕ್‌ ಟನ್‌ಗಳಷ್ಟು ಆಮ್ಲಜನಕದ ಅವಶ್ಯಕತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಕಳೆದ 7 ದಿನಗಳಲ್ಲಿ ಸರಾಸರಿ 880 ಮೆಟ್ರಿಕ್‌ ಟನ್‌ನಷ್ಟು ಬಳಕೆ ಆಗುತ್ತಿದೆ. ಅಲ್ಲದೆ, ನಿನ್ನೆ 66.7 (18-05-2021) ಮೆಟ್ರಿಕ್‌ ಟನ್‌ ನಷ್ಟು ಕೊರತೆಯೂ ಕಂಡುಬಂದಿದೆ ಎಂದು ಸಚಿವರು ತಿಳಿಸಿದರು.

RELATED TOPICS:
English summary :JagadishShettar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...