ಬ್ಲ್ಯಾಕ್ ಫಂಗಸ್ ಪತ್ತೆ ಹಚ್ಚೋದು ಹೇಗೆ? ಏನು ಕ್ರಮ ತೆಗೆದುಕೊಳ್ಳಬೇಕು? ಚಿಕಿತ್ಸಾ ವಿಧಾನವೇನು?: ಏಮ್ಸ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ? | ಜನತಾ ನ್ಯೂಸ್

20 May 2021
537
Black fungus treatment facility

ನವದೆಹಲಿ: : ದೇಶಾದ್ಯಂತ ಹಲವಾರು ಕೋವಿಡ್ ರೋಗಿಗಳ ಜೀವವನ್ನು ಬಲಿತೆಗೆದುಕೊಂಡ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳನ್ನು ಪತ್ತೆ ಹಚ್ಚಲು ಮತ್ತು ಆರೈಕೆ ಮಾಡಲು ಐಐಎಂಎಸ್ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ದೆಹಲಿಯ ಪ್ರತಿಷ್ಠಿತ ವೈದ್ಯ ವಿಜ್ಞಾನ ಸಂಸ್ಥೆ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದು, ಸೋಂಕನ್ನು ಹೇಗೆ ಗುರುತಿಸಬೇಕು ಹಾಗೂ ಅದಕ್ಕೆ ಏನೇನು ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವುದನ್ನು ವಿವರಿಸಿದೆ.

1. ಏಮ್ಸ್ ನೀಡಿದ ಮಾರ್ಗಸೂಚಿಯ ಪ್ರಕಾರ ಅನಿಯಂತ್ರಿತ ಮಧುಮೇಹ ಸಮಸ್ಯೆಯನ್ನು ಹೊಂದಿರುವವರು ಈ ಸಮಸ್ಯೆಗೆ ಹೆಚ್ಚಾಗಿ ಒಳಗಾಗುತ್ತಾರೆ. ಮಧುಮೇಹ ಕೀಟೋಆಸಿಡೋಸಿಸ್, ಅಧಸ್ಟಿರಾಯ್ಡ್ ಗಳನ್ನು ಪಡೆದುಕೊಂಡಿರುವ ಮಧುಮೇಹಿಗಳು ಅಥವಾ ಟೊಸಿಲಿಜುಮಾಬ್(tocilizumab) ಚಿಕಿತ್ಸೆ ಪಡೆದ ರೋಗಿಗಳು ಬ್ಲ್ಯಾಕ್ ಫಂಗಸ್‌ಗೆ ತುತ್ತಾಗುವ ಅಪಾಯವಿದೆ ಎಂದು ಏಮ್ಸ್ ಹೇಳಿದೆ.

2. ರೋಗನಿರೋಧಕ ಔಷಧಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದ ರೋಗಿಗಳು ಅಥವಾ ಆಯಂಟಿ ಕ್ಯಾನ್ಸರ್ ಚಿಕಿತ್ಸೆ ಹಾಗೂ ದೀರ್ಘಕಾಲದ ಅನಾರೋಗ್ಯವನ್ನು ಹೊಂದಿದ ರೋಗಿಗಳು ಕೂಡ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ.

3. ಕೊರೊನಾ ವೈರಸ್‌ನ ಗಂಭೀರ ಸಮಸ್ಯೆಗೆ ಒಳಗಾಗಿ ವೆಂಟಿಲೇಟರ್ ಮಾಸ್ಕ್ ಅಥವಾ ಮೂಗಿನ ಕೊಳವೆ ಮೂಲಕ ಆಮ್ಲಜನಕದ ಸಹಾಯದಲ್ಲಿದ್ದ ರೋಗಿಗಳು ಕೂಡ ಬ್ಲ್ಯಾಕ್ ಫಂಗಸ್‌ಗೆ ತುತ್ತಾಗುವ ಅಪಾಯವಿದೆ.

4. ಹೀಗೆ ಬ್ಲ್ಯಾಕ್ ಫಂಗಸ್ ಅಪಾಯವನ್ನು ಹೊಂದಿರುವ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರವೂ ವೈದ್ಯರ ತಪಾಸಣೆಗೆ ಒಳಗಾಗುವಂತೆ ಸಲಹೆ ನೀಡಲು ಏಮ್ಸ್ ವೈದ್ಯರು ಸಲಹೆ ನೀಡಿದ್ದಾರೆ.

ಕಪ್ಪು ಶಿಲೀಂಧ್ರ ಸೋಂಕನ್ನು ಕಂಡುಹಿಡಿಯುವುದು ಹೇಗೆ?

1. ಮೂಗಿನಿಂದ ಅಸಹಜ ಕಪ್ಪು ವಿಸರ್ಜನೆ, ರಕ್ತ ಬರುವುದು

2. ಮೂಗಿನಲ್ಲಿ ಕಿರಿಕಿರಿ, ತಲೆನೋವು, ಕಣ್ಣಿನ ನೋವು, ಕಣ್ಣಿನ ಸುತ್ತ ಊತ, ಎರಡೆರಡು ದೃಷ್ಟಿ, ಕಣ್ಣು ಕೆಂಪಾಗುವುದು, ಕಾಣದಿರುವುದು, ಅಸ್ಪಷ್ಟತೆ, ಕಣ್ಣು ತೆರೆಯುವುದಕ್ಕೆ ಹಾಗೂ ಮುಚ್ಚುದಕ್ಕೆ ಕಷ್ಟವಾಗುವುದು

3. ಮುಖ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವ ಅನುಭವ

4. ಆಹಾರ ಸೇವಿಸುವ ವೇಳೆ ನೋವು, ಬಾಯಿ ತೆರೆಯಲು ಕಷ್ಟವಾಗುವುದು

5. ಮುಖದಲ್ಲಿ ಊತ, ಕಪ್ಪುಗಟ್ಟುವಿಕೆ, ಗಟ್ಟಿಯಾಗುವಿಕೆ, ನೋವು ಕಾಣಿಸಿಕೊಳ್ಳುವುದು

6. ಹಲ್ಲು ಉದರುವುದು, ಬಾಯಿ ಒಳಗೂ ಕಪ್ಪು ಬಣ್ಣ ಹಾಗೂ ಊತ ಕಾಣಿಸಿಕೊಳ್ಳುವುದು

ಇವು ಬ್ಲ್ಯಾಕ್ ಫಂಗಸ್​ ಸೋಂಕಿನ ಕೆಲ ಪ್ರಮುಖ ಲಕ್ಷಣಗಳು

ಸೋಂಕು ಕಾಣಿಸಿಕೊಂಡಾಗ ಏನು ಮಾಡಬೇಕು?
1. ಬ್ಲ್ಯಾಕ್ ಫಂಗಸ್ ಪತ್ತೆಯಾದಾಗ ENT ವೈದ್ಯರು, ಕಣ್ಣಿನ ವೈದ್ಯರು ಅಥವಾ ಸೂಕ್ತ ತಜ್ಞರ ಬಳಿ ತೆರಳಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು

2. ರಕ್ತದಲ್ಲಿನ ಮಧುಮೇಹ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಸೂಕ್ತ ಕ್ರಮ ಅನುಸರಿಸಬೇಕು

3. ಇತರ ಆರೋಗ್ಯ ಸಮಸ್ಯೆಗಳಿದ್ದರೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದನ್ನು ತಪ್ಪಿಸಬಾರದು

4. ವೈದ್ಯರನ್ನು ಕೇಳದೆ ಯಾವ ಕಾರಣಕ್ಕೂ ಸ್ಟಿರಾಯ್ಡ್ ಹಾಗೂ ಆಯಂಟಿ ವೈರಲ್ ಡ್ರಗ್ ಪಡೆಯಬಾರದು

5. ವೈದ್ಯರ ಸಲಹೆ ಮೇರೆಗೆ MRI, ಸಿಟಿ ಸ್ಕ್ಯಾನ್ ಮಾಡಿಸಬೇಕು

RELATED TOPICS:
English summary :Black fungus treatment facility

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...