ಬೆಳಗಾವಿಯಲ್ಲಿ 20 ಮಕ್ಕಳ ಮೇಲೆ ಕೊವಿಡ್ ಲಸಿಕೆ ಪ್ರಯೋಗ ಯಶಸ್ವಿ! | ಜನತಾ ನ್ಯೂಸ್

20 May 2021
434
Ahmedabad-based Zydus Cadila ZyCoV-D clinical trial in belagavi jeevan rekha hospital finds success

ಬೆಳಗಾವಿ : ಹೈದರಾಬಾದ್ ಮೂಲದ ಭಾರತ್​ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ್ದ ಕೋವ್ಯಾಕ್ಸಿನ್ ಲಸಿಕೆಯ 3 ಹಂತದ ಕ್ಲಿನಿಕಲ್ ಟ್ರಯಲ್ ನಡೆಸಿದ್ದ ಇಲ್ಲಿನ ಜೀವನ ರೇಖಾ ಆಸ್ಪತ್ರೆ ಇದೀಗ ಮಕ್ಕಳಿಗಾಗಿ ಶೋಧಿಸಿರುವ ಕೋವಿಡ್ ಲಸಿಕೆಯ ಯಶಸ್ವಿ ಕ್ಲಿನಿಕಲ್ ಟ್ರಯಲ್ ನಡೆಸಿದೆ.

ಸದ್ಯಕ್ಕೆ ಬೆಳಗಾವಿಯಲ್ಲಿ ಮಕ್ಕಳ ಮೇಲೆ ಕೊವಿಡ್ ಲಸಿಕೆ ಪ್ರಯೋಗ ನಡೆದಿದೆ. 12 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಜೀವನ್ ರೇಖಾ ಆಸ್ಪತ್ರೆಯಲ್ಲಿ ಕೊವಿಡ್ ಲಸಿಕೆ ಪ್ರಯೋಗ ನಡೆದಿದೆ. ಝೈಕೋವ್​​ ಡಿ ಲಸಿಕೆಯ ಕ್ಲಿನಿಕಲ್ ಟ್ರಯಲ್ ಇದಾಗಿದೆ. ಜೈಡಸ್ ಕ್ಯಾಡಿಲಾ ಕಂಪನಿ ಅಭಿವೃದ್ಧಿ ಪಡಿಸಿರುವ ಝೈಕೋವ್​​ ಡಿ (ZyCoV-D) ಲಸಿಕೆ ಇದಾಗಿದೆ.

ಗುಜರಾತಿನ ಅಹ್ಮದಾಬಾದ್ ಮೂಲದ ಜೈಡಸ್ ಕ್ಯಾಡಿಲಾ ಕಂಪನಿ ಅಭಿವೃದ್ಧಿಪಡಿಸಿರುವ ಝೈಕೋವ ಡಿ ಲಸಿಕೆ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿ ನಡೆಸಿದೆ. ಬೆಳಗಾವಿಯ 20 ಮಕ್ಕಳ ಮೇಲೆ ಝೈಕೋವ ಡಿ ಲಸಿಕೆಯ ಕ್ಲಿನಿಕಲ್ ಟ್ರಯಲ್ ಮಾಡಿದ್ದೇವೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಅಮಿತ್ ಭಾತೆ ಮಾಹಿತಿ ನೀಡಿದ್ದಾರೆ.

ಈಗಾಗಲೇ 20 ಮಕ್ಕಳ ಮೇಲೆ 3 ಡೋಸ್ ಲಸಿಕೆಯ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದೆ. ಮೊದಲ ಲಸಿಕೆ ಪಡೆದ 28 ದಿನಕ್ಕೆ 2ನೇ ಡೋಸ್, 56ನೇ ದಿನಕ್ಕೆ 3ನೇ ಡೋಸ್ ನೀಡಿದ್ದೇವೆ. ಯಾವ ಮಕ್ಕಳ ಮೇಲೂ ಸಹ ಅಡ್ಡ ಪರಿಣಾಮ ಬೀರಿಲ್ಲ. ಕಾಲಕಾಲಕ್ಕೆ ರಕ್ತದ ಮಾದರಿ ಪಡೆದು ರೋಗನಿರೋಧಕ ಶಕ್ತಿ ಪರೀಕ್ಷಿಸಲಾಗಿದೆ.

12 ತಿಂಗಳ ಕಾಲ ಮಕ್ಕಳ ಮೇಲೆ ನಿಗಾ ಇಡಲಾಗುತ್ತದೆ. ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಯನ್ನು ಇಂಟ್ರಾ ಮಸ್ಕ್ಯೂಲರ್​​ಗೆ ಕೊಡಲಾಗುತ್ತೆ. ಆದರೆ ಝೈಕೋವ ಡಿ ಲಸಿಕೆಯನ್ನು ಇಂಟ್ರಾ ಡರ್ಮಲ್ ರೂಟ್‌ನಲ್ಲಿ ನೀಡಲಾಗಿದೆ ಎಂದರು.

ಈ ಮಕ್ಕಳಿಗೆ ಮೂರು ಡೋಸ್ ಗಳನ್ನು ನೀಡಲಾಗುತ್ತದೆ. ಮೊದಲ ಡೋಸ್ ಬಳಿಕ 28 ನೇ ದಿನಕ್ಕೆ ಎರಡನೇ ಹಾಗೂ 52ನೇ ದಿನಕ್ಕೆ ಮೂರನೇ ಡೋಸ್ ನೀಡಲಾಗುತ್ತದೆ. ಪ್ರತಿ ಡೋಸ್ ಪಡೆದ ನಂತರ ಅವರಲ್ಲಿ ರೋಗ ನಿರೋಧಕ ಶಕ್ತಿಯನ್ನು ಪರೀಕ್ಷಿಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗುವದು ಎಂದು ಡಾ ಅಮಿತ್ ಹೇಳಿದರು.

RELATED TOPICS:
English summary :Ahmedabad-based Zydus Cadila ZyCoV-D clinical trial in belagavi jeevan rekha hospital finds success

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...