Sat,Apr27,2024
ಕನ್ನಡ / English

ಕಪ್ಪು ಶಿಲೀಂಧ್ರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ಹೆಚ್ ಡಿ ಕುಮಾರಸ್ವಾಮಿ ಒತ್ತಾಯ | ಜನತಾ ನ್ಯೂಸ್

21 May 2021
1104

ಬೆಂಗಳೂರು : ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್‌ ಮೈಕೊಸಿಸ್‌) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ "ಸಾಂಕ್ರಾಮಿಕ" ಎಂದು ಘೋಷಿಸಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು 1897ರ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ಕಪ್ಪು ಶಿಲೀಂಧ್ರ ರೋಗದಲ್ಲಿ ಸಾವಿನ ಸಾಧ್ಯತೆಗಳು ಹೆಚ್ಚಿವೆ. ಮಾರಕ, ಭಯಾನಕವೂ ಆಗಿರುವ ಈ ಕಾಯಿಲೆಯನ್ನು ಹಿಮ್ಮೆಟ್ಟಿಸಲೇಬೇಕಿದೆ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗಗಳ ನಿರ್ವಹಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ಆಲಸ್ಯ ಸರಿಯಲ್ಲ. ಕಪ್ಪು ಶಿಲೀಂಧ್ರ ರೋಗದ ನಿರ್ವಹಣೆಯಲ್ಲಿ ಸರ್ಕಾರ ಪದೇ ಪದೇ ಎಡವುತ್ತಿರುವುದು ಕಾಣಿಸುತ್ತಿದೆ. ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನು ಹೊಂದದೇ ಇರುವುದು, ಅಗತ್ಯ ಪ್ರಮಾಣದ ಔಷಧವನ್ನು ಕೇಳಿ ಪಡೆದುಕೊಳ್ಳದೇ ಇರುವುದು ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ.ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು. ಕೋವಿಡ್‌ ಪ್ರಕರಣಗಳು ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿವೆ. ಅಂದರೆ, ಕಪ್ಪು ಶಿಲೀಂಧ್ರ ರೋಗವೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್‌ಟಿ ಪರಿಣತರು, ಜನರಲ್ ಸರ್ಜನ್‌ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಒತ್ತಾಯಿಸಿದ್ದಾರೆ.

RELATED TOPICS:
English summary :HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...