Sat,Apr20,2024
ಕನ್ನಡ / English

ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ, ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ! | ಜನತಾ ನ್ಯೂಸ್

21 May 2021
1179

ಬೆಂಗಳೂರು : ಕೋವಿಡ್ ನಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಬಳಿಕ ಸಿದ್ದರಾಮಯ್ಯ ಮಾತನಾಡಿ, ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ತಿಳಿಸಿದ್ದಾರೆ.

ಕೊರೊನಾದಿಂದಾಗಿ ರಾಜ್ಯ ಸೂತಕದ ಮನೆಯಾಗಿದೆ. ಆಕ್ಸಿಜನ್, ಬೆಡ್, ವೆಂಟಿಲೇಟರ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲು ಉದ್ದೇಶಿಸಿದ್ದೆ. ಇದು ಜಿಲ್ಲಾಧಿಕಾರಿಗಳ ಸಭೆ ಅಥವಾ ಪ್ರಗತಿ ಪರಿಶೀಲನೆ ಸಭೆ ಅಲ್ಲ. ಆದರೂ ಮಾಹಿತಿ ಸಂಗ್ರಹಕ್ಕೆ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಲು ಉದ್ದೇಶಿಸಿದ್ದೇನೆ ಎಂದು ಹೇಳಿದರು.

2009ರಲ್ಲಿಯೂ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೋವಿಡ್ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಸಿಎಂ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.

RELATED TOPICS:
English summary :Siddaramaiah

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...