ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್ | ಜನತಾ ನ್ಯೂಸ್
ದಾವಣಗೆರೆ : ಬ್ಲ್ಯಾಕ್ ಫಂಗಸ್ ಸೋಂಕು ಸಾಂಕ್ರಾಮಿಕ ರೋಗವಲ್ಲ. ಆದ್ದರಿಂದ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿಯೂ ಈವರೆಗೆ 15 ರಿಂದ 20 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಸೋಂಕಿಗೆ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಸೋಂಕು ನಿವಾರಣೆಗೆ ಅಗತ್ಯವಿರುವ ಔಷಧಿ ಪೂರೈಕೆಗೂ ಕ್ರಮ ವಹಿಸಲಾಗಿದ್ದು, ಇದು ಸಾಂಕ್ರಾಮಿಕ ರೋಗವಲ್ಲ, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದರು.
ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು, ಕೋವಿಡ್ ಚಿಕಿತ್ಸೆಯಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆ, ಅನಿಯಂತ್ರಿತ ಮಧುಮೇಹ ಮುಂತಾದ ಕಾರಣಗಳಿಂದ ಈ ಸೋಂಕು ಉಂಟಾಗುತ್ತಿದೆ ಎಂದರು.
RELATED TOPICS:
English summary :Black fungus