ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ, ಗಣ್ಯರಿಂದ ಸಂತಾಪ! | ಜನತಾ ನ್ಯೂಸ್

21 May 2021
395
Former Speaker Krishna

ಮಂಡ್ಯ : ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಕೃಷ್ಣ (80) ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹಿರಿಯ ನಾಯಕ ಶುಕ್ರವಾರದಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೊತ್ತಮಾರನಹಳ್ಳಿ ಕೃಷ್ಣ ತಮ್ಮ ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 2006 ರಿಂದ 2008 ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದ ಅವರು ಎಸ್‌.ಆರ್‌.ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಕೆ.ಆರ್.ಪೇಟೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. ಒಂದು ಬಾರಿ ಸಂಸದರಾಗಿದ್ದರು. 1996ರಲ್ಲಿ ಸೋಲಿಲ್ಲದ ಸರದಾರರಾಗಿದ್ದ ಮತ್ತೊಬ್ಬ ಗಾಂಧಿಯಾಗಿದ್ದ ಮಾಜಿ ಸಂಸದ ಜಿ.ಮಾದೇಗೌಡರನ್ನು ಸೋಲಿಸಿ ಸಂಸದರಾಗಿದ್ದರು.

1988ರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜೆಡಿಎಸ್ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 2006 ರಿಂದ 2008 ರವರೆಗೆ ವಿಧಾನಸಭೆ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ಕೆ.ಆರ್.ಪೇಟೆ ತಾಲೂಕಿನ ಮೊದಲ ಸಚಿವರಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದರು.

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಾಳೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್ ಪೇಟೆ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಾನುರಾಗಿ ನಾಯಕನಾಗಿದ್ದ ಕೃಷ್ಣ, ತಾಲ್ಲೂಕು ಬೋರ್ಡು ಸದಸ್ಯರಾಗಿ, ಶಾಸಕರಾಗಿ, ಸಚಿವರಾಗಿ ಹಾಗೂ ಸಂಸದರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ವಿಧಾನಸಭೆಯ ಸ್ಪೀಕರ್ ಆಗಿ ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಮಾಜಿ ಸ್ಪೀಕರ್ ಕೃಷ್ಣ ನಿಧನಕ್ಕೆ ಮಂಡ್ಯ ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, "ಸರಳ ಸಜ್ಜನ ರಾಜಕಾರಣಿ, ವಿಧಾನಸಭೆಯ ಮಾಜಿ ಸ್ಪೀಕರ್ ಕೃಷ್ಣ ಅವರು ನಮ್ಮನ್ನು ಅಗಲಿರುವುದು ಮಂಡ್ಯ ಜಿಲ್ಲೆಗೆ ಮತ್ತು ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಮನೆಯವರು ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ವ್ಯಕ್ತಿತ್ವ ನಮಗೆ ಸದಾ ಪ್ರೇರಣೆಯಾಗಿ ಉಳಿಯಲಿದೆ' ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕ ಕಂಡ ಸಜ್ಜನ-ಸರಳ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಆರ್ ‌ಪೇಟೆ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಕಂಬನಿ ಮಿಡಿದಿದ್ದಾರೆ. ರಾಜಕೀಯ ತಳಮಟ್ಟದಿಂದ ಜನ ನಾಯಕರಾಗಿ ಬೆಳೆದ ಕೃಷ್ಣ ಅವರು, ಅಸಾಧಾರಣ ಸಂಸದೀಯ ಪಟುವಾಗಿದ್ದರು. ಜನಪರವಾದ ಯಾವುದೇ ವಿಷಯದ ಬಗ್ಗೆ ಸಮರ್ಥವಾಗಿ ಚರ್ಚೆ ನಡೆಸುವುದು ಮಾತ್ರವಲ್ಲದೆ, ಅದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದರು ಎಂದಿದ್ದಾರೆ.

ವಿಧಾನಸಭೆಯ ಅಧ್ಯಕ್ಷರಾಗಿ ತಮ್ಮದೇ ಛಾಪು‌ ಮೂಡಿಸಿದ್ದ ಕೃಷ್ಣ ಅವರು ತಮ್ಮ ಕಾರ್ಯ ವೈಖರಿಯಿಂದ ಆ ಹುದ್ದೆಯನ್ನು ಅಲಂಕರಿಸಿದ ಎಲ್ಲರಿಗೂ ಮಾದರಿಯಾಗಿ ಉಳಿದರು. ಎಸ್ ಆರ್ ಬೊಮ್ಮಾಯಿ ಅವರ ಸಂಪುಟದಲ್ಲಿಯೂ ಕ್ರಿಯಾಶೀಲ ಸಚಿವರಾಗಿ ಕೆಲಸ‌ ಮಾಡಿದ್ದ ಕೃಷ್ಣ ತಮ್ಮ ಸರಳ ಸಜ್ಜನಿಕೆಗಳ ನಡೆಯಿಂದ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಮಂಡ್ಯದ ಗಾಂಧಿಯೆಂದೇ ಪ್ರಖ್ಯಾತರಾಗಿದ್ದರು. ಅವರ ನಿಧನದಿಂದ ಕರ್ನಾಟಕ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ, ಅವರ ಅಗಲಿಕೆಯನ್ನು‌ ಭರಿಸಲು ಅವರ ಕುಟುಂಬಕ್ಕೆ ಭಗವಂತ ಶಕ್ತಿ ನೀಡಲಿ‌ ಎಂದು ಸಚಿವ ಸುರೇಶ್‌ಕುಮಾರ್ ಸಂತಾಪ‌ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಟ್ವಿಟ್ ನಲ್ಲಿ, ಸರಳ, ಸಜ್ಜನ ರಾಜಕಾರಣಿ, ಮಾಜಿ ಸ್ಪೀಕರ್ ಕೆ. ಆರ್. ಪೇಟೆ ಕೃಷ್ಣ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಮಾಜಿ ಸ್ಪೀಕರ್ ಕೆ ಆರ್ ಪೇಟೆ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಅವರ ನಿಧನಕ್ಕೆ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ .ಪಿ. ಯೋಗೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಆತ್ಮೀಯರು, ಹಿತೈಷಿಗಳು, ಮಾರ್ಗದರ್ಶಕರೂ ಆಗಿದ್ದ ಮಾಜಿ ಸ್ಪೀಕರ್ ಕೆ ಆರ್ ಪೇಟೆ ಕೃಷ್ಣ ಅವರ ನಿಧನಕ್ಕೆ ಯುವ ಸಬಲೀಕರ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Former Speaker Krishna

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...