9 ವರ್ಷ ಪ್ರೀತಿಸಿ, ಮದುವೆಯಾಗಿ ಕೈಕೊಟ್ಟ ಪ್ರಿಯಕರ; ಯುವಕನ ಮನೆ ಎದುರು ಯುವತಿಯ ಧರಣಿ | ಜನತಾ ನ್ಯೂಸ್

22 May 2021
489
Kolar

ಕೋಲಾರ : ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪ್ರಿಯಕರನ ಮನೆ ಎದುರು ಯುವತಿಯ ಏಕಾಂಗಿ ಧರಣಿ ನಡೆಸುತ್ತಿರುವ ಘಟನೆ ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಹೇಶ್ ಹಾಗೂ ಅದೇ ಅರಾಬಿಕೊತ್ತನೂರು ಗ್ರಾಮದ ಅಂಬಿಕಾ ಕಳೆದ 9 ವರ್ಷದಿಂದ ಪರಸ್ಪರ ಪ್ರೀತಿ-ಪ್ರೇಮವೆಂದು ಒಡಾಡಿದ್ದಾರೆ. ಅಂಬಿಕಾ ಒತ್ತಾಯಕ್ಕೆ ಕಳೆದ ಒಂದು ವಾರದ ಹಿಂದೆಯಷ್ಟೆ ಮಹೇಶ್​ ಮನೆಯಲ್ಲೆ ಮದುವೆಯಾಗಿದ್ದಾನೆ.

ಬಳಿಕ ಮನೆಗೆ ಕರೆದೊಯ್ಯುವಂತೆ ಅಂಬಿಕಾ ಕೇಳುತ್ತಿದ್ದರೂ ಸತಾಯಿಸಲು ಆರಂಭಿಸಿದ್ದಾನೆ. ಅಷ್ಟೇ ಅಲ್ಲದೆ ಪೋಷಕರು ಹೇಳಿದಂತೆ ಬೇರೊಬ್ಬ ಯುವತಿಯನ್ನ ಮದುವೆಯಾಗಲು ಮಹೇಶ್ ಮುಂದಾಗಿದ್ದಾನೆ.

ಈ ವಿಚಾರ ತಿಳಿದ ಅಂಬಿಕಾ ಕಳೆದ ಮೂರು ದಿನದಿಂದ ಮಹೇಶ್ ನಿವಾಸದ ಎದುರು‌ ಧರಣಿ ಕುಳಿತಿದ್ದಾಳೆ. ಮನೆ ಎದುರು ಅಂಬಿಕಾ ಧರಣಿ ಕೂರುವ ಮಾಹಿತಿ ತಿಳಿದಿರುವ ಮಹೇಶ್ ಗ್ರಾಮದಿಂದಲೇ ನಾಪತ್ತೆಯಾಗಿದ್ದಾನೆ.

ಇಬ್ಬರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, 9 ವರ್ಷಗಳ ಹಿಂದೆಯೇ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು. ಇಷ್ಟ ಪಟ್ಟಿದ್ದರಿಂದಲೇ ಲೈಂಗಿಕವಾಗಿ ಬಳಸಿಕೊಂಡು ಮಹೇಶ್ ನನಗೆ ಮೋಸ ಮಾಡುತ್ತಿದ್ದಾನೆಂದು ನೊಂದ ಅಂಬಿಕಾ ಆರೋಪಿಸಿದ್ದಾರೆ.

ಪ್ರೀತಿಸಿ ವಂಚನೆ ಮಾಡಲು ಹೊರಟಿರುವ ಮಹೇಶ್ ವಿರುದ್ದ ಈಗಾಗಲೇ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿರುವ ಅಂಬಿಕಾ, ಜೊತೆಗೆ ಫೋಟೋಗಳನ್ನ ಪೊಲೀಸರಿಗೆ ದಾಖಲೆಯಾಗಿ ನೀಡಿದ್ದೇನೆ ಎಂದಿದ್ದಾಳೆ, ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿದ್ದಾರೆ. ಮಹಿಳಾ ಸಾಂತ್ವಾನ ಕೇಂದ್ರಕ್ಕೂ ದೂರು ನೀಡಿದ್ದು, ಮಹೇಶ್ ಜೊತೆಗೆ ಜೀವನ ನಡೆಸಲು ಅವಕಾಶ ನೀಡುವಂತೆಯೂ ಮನವಿಯನ್ನು ಅಂಬಿಕಾ ಸಲ್ಲಿಸಿದ್ದಾರೆ.

ಯುವತಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮಹೇಶ್ ಪೋಷಕರು, ಮಹೇಶ್ ಜೊತೆಗೆ ಸಲುಗೆಯಿಂದ ಇದ್ದದ್ದು ನಿನ್ನದೆ ತಪ್ಪು, ಪೊಲೀಸ್ ಠಾಣೆಗೆ ದೂರು ನೀಡಿ, ಯಾವ ಕಾರಣಕ್ಕೆ ಪ್ರತಿಭಟನೆ ಮಾಡಲು ಬಂದಿದ್ದೀಯಾ? ನ್ಯಾಯಾಲಯದಲ್ಲೇ ಪ್ರಕರಣ ಇತ್ಯರ್ಥ ಮಾಡಿಕೋ ಎನ್ನುತ್ತಾ ಸ್ಥಳದಿಂದ ಹೋಗುವಂತೆ ಒತ್ತಡ ಹಾಕುತ್ತಿದ್ದಾರೆ ಎಂದಿದ್ದಾಳೆ.

RELATED TOPICS:
English summary :Kolar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...