ಯುವಕನಿಗೆ ಮೂತ್ರ ನೆಕ್ಕಿಸಿದ ಆರೋಪ: ಪಿಎಸ್ಐ ಅರ್ಜುನ್ ಸಸ್ಪೆಂಡ್! | ಜನತಾ ನ್ಯೂಸ್
ಚಿಕ್ಕಮಗಳೂರು : ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ಐ ಅರ್ಜುನ್ರನ್ನು ಅಮಾನತು ಮಾಡಲಾಗಿದೆ.
ಆರೋಪಿ ಗೋಣಿಬೀಡು ಪಿಎಸ್ಐ ಅರ್ಜುನ್ರನ್ನು ಸಸ್ಪೆಂಡ್ ಮಾಡಿ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಎಂಬಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆ ಸಂಭವಿಸಿತ್ತು. ಕಿರುಗುಂದ ಗ್ರಾಮಕ್ಕೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿದ್ದರು.
ಬಾಯಿಗೆ ಮೂತ್ರ ಹುಯ್ಯಿಸಿ, ನೆಲದಲ್ಲಿದ್ದ ಮೂತ್ರ ನೆಕ್ಕಿಸಿದ್ದಾರೆ ಎಂದು ಪರಿಶಿಷ್ಟ ಸಮುದಾಯದ ಯುವಕ ನೀಡಿರುವ ದೂರಿಗೆ ಸಂಬಂಧಿಸಿದಂತೆ ಗೋಣಿಬೀಡು ಠಾಣೆ ಪಿಎಸ್ಐ ಕೆ.ಅರ್ಜುನ್ ಹೊರಕೇರಿ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿತ್ತು.
ಕಿರುಗುಂದ ಗ್ರಾಮದ ಕೆ.ಎಲ್.ಪುನೀತ್ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಪಿಎಸ್ಐ ಅರ್ಜುನ್ ಅವರನ್ನು ಅಮಾನತುಗೊಳಿಸಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.
ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿದ್ದಾರೆ ಎಂದು ಆರೋಪಿಸಿ ಪರಿಶಿಷ್ಟ ಜಾತಿಯ ಕೆ.ಎಲ್.ಪುನೀತ್ ನೀಡಿರುವ ದೂರಿಗೆ ಸಂಬಂಧಿಸಿದಂತೆ ಸಿಐಡಿ(ಸಿಐಡಿ ತಂಡ ಮತ್ತು ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ) ಅವರಿಂದ ತನಿಖೆ ಶುರುವಾಗಿದೆ. ಅವರು ಗೋಣಿಬೀಡು ಠಾಣೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವವನನ್ನು ಈಗ ಸಸ್ಪೆಂಡ್ ಮಾಡಿದ್ದಾರೆ. ಪಿಎಸ್ ಐ ವಿರುದ್ಧ ಎಫ್ ಐಆರ್ ದಾಖಲಿಸಬೇಕು ಮತ್ತು ಕೂಡಲೇ ಅವನನ್ನು ಬಂಧಿಸಬೇಕು. ಬಲತ್ಕಾರವಾಗಿ ಮೂತ್ರ ಕುಡಿಡುವುದು ಅಮಾನವೀಯ. ಅದು ಒಬ್ಬ ಪಿಎಸ್ ಐ ಇಂತಹ ಅಮಾನವೀಯ ಕೃತ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.