ಯೋಗೀಶ್ ಗೌಡ ಹತ್ಯೆ ಪ್ರಕರಣ: ಹೈಕೋರ್ಟ್ ನಿಂದ ಜಾಮೀನು ಅರ್ಜಿ ವಜಾ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಚಾರ್ಜ್ ಶೀಟ್ ಪರಿಗಣಿಸಿದ ಹೈಕೋರ್ಟ್, ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದು, ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂದು ಹೇಳಿ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ವಿನಯ್ ಕುಲ್ಕರ್ಣಿ, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ವಿನಯ್ ಕುಲ್ಕರ್ಣಿ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಅವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ನೀಡದಂತೆ ವಾದ ಮಂಡಿಸಿದರು.