ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ: ವಿಡಿಯೋದಲ್ಲಿರುವುದು ನಾನೇ ಎಂದ ರಮೇಶ್ ಜಾರಕಿಹೊಳಿ! | ಜನತಾ ನ್ಯೂಸ್

25 May 2021
400
Ramesh Jarkiholi

ಬೆಂಗಳೂರು : ತೀವ್ರ ಸಂಚಲನ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

ಆ ವಿಡಿಯೋದಲ್ಲಿರುವುದು ನಾನಲ್ಲ, ಯಾರೋ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಪೊಲೀಸರ ಮುಂದೆ ವಾದಿಸಿದ್ದ ರಮೇಶ್ ಜಾರಕಿಹೊಳಿ ಇದೀಗ ತನಿಖಾಧಿಕಾರಿಗಳ ಎದುರು ಆ ವಿಡಿಯೋದಲ್ಲಿರುವುದು ನಾನೇ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಆದ್ರೇ.. ದಿಢೀರ್ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾಗಿ, ಸಿಡಿಯಲ್ಲಿ ಯುವತಿಯ ಜೊತೆಗಿರುವ ವ್ಯಕ್ತಿ ನಾನೇ, ನಮ್ಮದು ಒಪ್ಪಿತ ಸಂಬಂಧವಾಗಿ ಎಂಬುದಾಗಿ ಹೇಳುವ ಮೂಲಕ, ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

ಲೈಂಗಿಕ ಕ್ರಿಯೆ ದೃಶ್ಯಾವಳಿಯ ಸಿಡಿ ಹೊರ ಬೀಳುತ್ತಿದ್ದಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿಯಲ್ಲಿ ಇರೋದು ನಾನಲ್ಲ. ಇದೊಂದು ಫೇಕ್ ಸಿಡಿಯಾಗಿದೆ. ಮ್ಯಾಫಿಂಗ್ ಮಾಡಲಾಗಿದೆ. ನನ್ನನ್ನು ಹನಿಟ್ರ್ಯಾಪ್ ಮಾಡಲಾಗಿ ಎಂದೆಲ್ಲಾ ಹೇಳಿಕೆ ನೀಡುತ್ತಿದ್ದರು. ಜೊತೆಗೆ ಯಾವುದೇ ಕಾರಣಕ್ಕೂ ಆ ಸಿಡಿಯಲ್ಲಿರುವ ದೃಶ್ಯಾವಳಿಗಳು ನನ್ನದಲ್ಲ. ತಂತ್ರಜ್ಞಾನ ಬಳಸಿ, ನಕಲಿ ಸಿಡಿ ಸೃಷ್ಠಿಸಲಾಗಿದೆ ಎಂಬುದಾಗಿ ಆರೋಪಿಸಿದ್ದರು.

ಈಗ ದಿಢೀರ್ ಬಿಗ್ ಟ್ವಿಸ್ಟ್ ಸಿಡಿ ಪ್ರಕರಣಕ್ಕೆ ಸಿಕ್ಕಿದೆ.

ಸಿಡಿಯಲ್ಲಿ ಯುವತಿ ಜೊತೆಗೆ ಇರುವುದು ತಾವೇ ಎಂದು ಒಪ್ಪಿಕೊಂಡಿರುವ ರಮೇಶ್ ಜಾರಕಿಹೊಳಿ, ನನಗೆ ಆ ಯುವತಿಯ ಪರಿಚಯವಿದೆ. ಆಕೆಯ ಒಪ್ಪಿಗೆಯ ಬಳಿಕವೇ ನಾವಿಬ್ಬರೂ ಲೈಂಗಿಕ ಕ್ರಿಯೆ ನಡೆಸಿದ್ದೆವು. ಇದು ಒಮ್ಮತದ ಲೈಂಗಿಕ ಕ್ರಿಯೆ ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ

ಆ ಯುವತಿಯ ಅನುಮತಿ ಪಡೆದು ಲೈಂಗಿಕ ಕ್ರಿಯೆ ನಡೆಸಿದ್ದು, ಇದನ್ನು ಯಾರೋ ದುರುದ್ದೇಶದಿಂದ ವಿಡಿಯೋ ಮಾಡಿಕೊಂಡಿದ್ದಾರೆ. ಅದನ್ನು ನನ್ನ ರಾಜಕೀಯ ಜೀವನವನ್ನು ಮುಗಿಸಲು ಬಳಸಿದ್ದಾರೆ. ಆ ಯುವತಿ ಯಾವುದೋ ಒಂದು ಪ್ರಾಜೆಕ್ಟ್ ವಿಚಾರವಾಗಿ ನನ್ನನ್ನು ಭೇಟಿ ಮಾಡಲು ಬಂದಿದ್ದಳು ಎಂದು ಮಾಜಿ ಸಚಿವ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾಗಿದೆ.

ಈ ಮೂಲಕ ಬೆಳಗಾವಿ ಸಾಹುಕಾರ್ ಅಶ್ಲೀಲ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಶೇಷ ತನಿಖಾಧಿಕಾರಿ ಎಂ. ಸಿ. ಕವಿತಾ ಎದುರು ವಿಚಾರಣೆಗೆ ಹಾಜರಾಗಿದ್ದ ರಮೇಶ್ ಜಾರಕಿಹೊಳಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಇದೊಂದು ಒಪ್ಪಿತ ಲೈಂಗಿಕ ಸಂಬಂಧ ಎಂದೂ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಪ್ರಕರಣವನ್ನು ಸಂಧಾನದಲ್ಲಿ ಮುಕ್ತಾಯಗೊಳಿಸುವುದು ಇದರ ಹಿಂದೆ ಉದ್ದೇಶ ಇದೆ ಎಂಬ ಮಾಹಿತಿಯೂ ಇದೆ.

ಒಮ್ಮತದ ಲೈಂಗಿಕ ಸಂಪರ್ಕವನ್ನೇ ಅತ್ಯಾಚಾರವೆಂದು ಬಿಂಬಿಸಲು ಹೊರಟಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಇದರಲ್ಲಿ ನನ್ನ ತಪ್ಪೇನೂ ಇಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾಗಿದೆ.

RELATED TOPICS:
English summary :Ramesh Jarkiholi

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...