Thu,Apr25,2024
ಕನ್ನಡ / English

ದ್ವಿತೀಯ ಪಿಯು ಪರೀಕ್ಷಾ ಅಭ್ಯಾಸ: ಶಿಕ್ಷಣ ಸಚಿವರಿಂದ "ವಿದ್ಯಾರ್ಥಿ ಸೇಹಿ ದೀಕ್ಷಾ ಅಪ್ಲಿಕೇಶನ್‌" ಗೆ ಚಾಲನೆ | ಜನತಾ ನ್ಯೂಸ್

25 May 2021
1088

ಬೆಂಗಳೂರು : ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಪ್ರಸ್ತುತ ಪಡಿಸಿದ "ದೀಕ್ಷಾ"-ಆಪ್ ಅನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಚಾಲನೆ ನೀಡಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷಾ ಅಭ್ಯಾಸಕ್ಕೆ ಈ ಅಪ್ಲಿಕೇಶನ್‌ ಸಹಾಕಾರಿಯಾಗಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಗೂ ಅಪ್ಲಿಕೇಶನ್‌ ವರದಾನವಾಗಲಿದೆ ಎಂದು ಹೇಳಲಾಗ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆಪ್ ಸಹಕಾರಿಯಾಗಲಿದೆ ಎಂದರು.

ಅದೇ ರೀತಿಯಾಗಿ ಡಿ.ಎಸ್.ಇ.ಆರ್.ಟಿ.ಯು 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳಿಗೆ ಸಿದ್ಧತೆ ಮಾಡುವುದಕ್ಕಾಗಿ ಫೋಕಸ್ ಎಂಬ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಿದೆ. ಪ್ರತಿಯೊಂದು ವಿಷಯಕ್ಕೆ ಇ- ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆಪತ್ರಿಕೆಗಳು, ವಿವರಾಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ ಎಂದು ಸಚಿವರು ಹೇಳಿದರು.

ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ (PCMB) ವಿಷಯಕ್ಕೆ ಸುಮಾರು 9000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಪ್ರಥಮವಾಗಿ ಜಾರಿಗೊಳಿಸುತ್ತಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.

ಈ ಎಲ್ಲ ಪಠ್ಯಾಂಶಗಳನ್ನು ದೀಕ್ಷಾ ಆಪ್ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಸುರೇಶ್ ಕುಮಾರ್ ಕೋರಿದರು.

ದೀಕ್ಷಾ ಪೋರ್ಟಲ್ ಅನ್ನು https://diksha.gov.in/ ಇಲ್ಲಿ ನೋಡಬಹುದಾಗಿದೆ. ಆಂಡ್ರಾಯ್ಡ್​ ಫೋನ್​​ಗಳಲ್ಲಿ ದೀಕ್ಷಾ ಆಪ್ ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ http://bit.ly/KA-diksha ಲಿಂಕ್ ಒತ್ತಿ ದೀಕ್ಷಾ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.

RELATED TOPICS:
English summary :Suresh Kumar

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...