ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು! | ಜನತಾ ನ್ಯೂಸ್

26 May 2021
456
Duniya Viji

ಬೆಂಗಳೂರು : ಸ್ಯಾಂಡಲ್‌ವುಡ್‌ನ ದುನಿಯಾ ವಿಜಯ್ ಅವರ ತಂದೆ-ತಾಯಿಗೆ ಕೋವಿಡ್-19 ಪಾಸಿಟಿವ್ ಕಂಡುಬಂದಿತ್ತು. ಕಳೆದ ತಿಂಗಳು ದುನಿಯಾ ವಿಜಯ್ ಅವರ ತಂದೆ-ತಾಯಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು.

ಕಳೆದ 25 ದಿನಗಳ ಹಿಂದೆ ದುನಿಯಾ ವಿಜಯ್ ತಂದೆ-ತಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ವೈದ್ಯರ ಸಲಹೆ ಹಾಗೂ ಮಾರ್ಗದರ್ಶನದಿಂದ ಮನೆಯಲ್ಲೇ ಚಿಕಿತ್ಸೆ ಪಡೆದುಕೊಂಡ ದುನಿಯಾ ವಿಜಯ್ ಅವರ 80 ವರ್ಷದ ತಂದೆ ರುದ್ರಪ್ಪ ಹಾಗೂ 76 ವರ್ಷದ ತಾಯಿ ನಾರಾಯಣಮ್ಮ ಕೊರೊನಾ ಗೆದ್ದು ಈಗ ಗುಣಮುಖರಾಗಿದ್ದಾರೆ.

ಕೊರೊನಾ ಸೋಂಕು ತಗುಲಿದೆ ಎಂದ ಮಾತ್ರಕ್ಕೆ ಭಯಪಡಬೇಡಿ.. ಧೈರ್ಯವಾಗಿರಿ..! ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ ಎಂದು ಧೃತಿಗೆಡಬೇಡಿ. ವೈದ್ಯರ ಸಲಹೆ ಪಡೆದು, ವೈದ್ಯರ ಮಾರ್ಗದರ್ಶನದಿಂದ ಮನೆಯಲ್ಲೇ ಚಿಕಿತ್ಸೆ ಮಾಡಿದರೆ ಖಂಡಿತವಾಗಿಯೂ ಗುಣಮುಖರಾಗುತ್ತಾರೆ. ಅದಕ್ಕೆ ನನ್ನ ತಂದೆ-ತಾಯಿಯೇ ಸಾಕ್ಷಿ. ಮನೆಯಲ್ಲಿ ವಯಸ್ಸಾಗಿರುವವರು ಯಾರೇ ಇದ್ದರೂ ಪ್ರೀತಿಯಿಂದ ನೋಡಿಕೊಂಡರೆ ಕೊರೊನಾ ಗೆಲ್ಲಬಹುದು ಎಂದು ತಾವು ಹಂಚಿಕೊಂಡ ವಿಡಿಯೋದಲ್ಲಿ ನಟ ದುನಿಯಾ ವಿಜಯ್ ಹೇಳಿದ್ದಾರೆ.

ದುನಿಯಾ ವಿಜಯ್ ಮಾತು :

ನನ್ನ ಜನ್ಮದಾತರಿಬ್ಬರಿಗೂ ಕೊರೊನಾ ಪಾಸಿಟಿವ್ ಆಗಿದೆ ಎಂದಾಗ ಒಂದು ಕ್ಷಣ ನಲುಗಿದೆ. ಮತ್ತೆ ಮರುಕ್ಷಣ ಕಾರ್ಯಶೀಲನಾದೆ. ಬಿಯು ನಂಬರ್ ಬರೋವರೆಗೂ ನಮ್ಮ ತಂದೆ-ತಾಯಿಗೆ ಬೆಡ್ ಸಿಗಲ್ಲ ಎಂಬ ವಿಷಯ ನನಗೆ ತಿಳಿಯಿತು.

ನನ್ನ ತಂದೆಗೆ 80 ವರ್ಷ ವಯಸ್ಸು. ನನ್ನ ತಾಯಿಗೆ 76 ವರ್ಷ. ಈಗಾಗಲೇ ಅವರ ಆರೋಗ್ಯದ ಸ್ಥಿತಿ ಹದಗೆಟ್ಟಿದೆ. ಯೋಚಿಸಿಕೊಂಡು ಕೂರುವ ಸಮಯ ಇದಲ್ಲ ಎಂದು ತಿಳಿದ ನಾನು ನನ್ನ ಆತ್ಮೀಯ ವೈದ್ಯ ವಿದ್ಯಾನಂದರನ್ನು ಸಂಪರ್ಕಿಸಿದೆ. ಮರುದಿನ ಬೆಳಗ್ಗೆ ಆಕ್ಸಿಜನ್, ಮೆಡಿಸಿನ್ ಜೊತೆಗೆ ಈಶ್ವರ್ ಎಂಬ ಆರೋಗ್ಯ ಶುಶ್ರೂಷಕ ಬಂದು ಇಳಿದರು. ನಾನು, ನನ್ನ ಮಗ ಮತ್ತು ಕೀರ್ತಿ.. ಮೂರು ಜನ ಕೊರೊನಾ ಜೊತೆ ಸೆಣಸಾಡಲು ನಿಂತೆವು.

ನಮ್ಮ ತಂದೆ ಈಗಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಈ ಕೊರೊನಾ ತುಂಬಾ ಬಳಲುವಂತೆ ಮಾಡಿತು. ನಮ್ಮ ತಾಯಿ ಎರಡು ಮೂರು ದಿನಗಳಲ್ಲಿ ಚಿಕಿತ್ಸೆಗೆ ಸ್ಪಂದಿಸಲು ಪ್ರಾರಂಭಿಸಿದರು. ಪ್ರತಿ ದಿನ ವಿಡಿಯೋ ಕಾಲ್ ಮೂಲಕ ವೈದ್ಯರು ಚಿಕಿತ್ಸೆಯನ್ನು ಹೇಳುತ್ತಿದ್ದರು.

ನಮ್ಮ ತಂದೆಯ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸಲು ಪ್ರಾರಂಭಿಸಿತು. ಯಾವ ಮಟ್ಟಿಗೆ ಅಂದ್ರೆ ನನ್ನ ಆತ್ಮೀಯರು ಫೋನ್ ಮಾಡಿದಾಗ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂಬ ಅನುಮಾನ ಕಾಡುತ್ತಿದೆ ಎಂದು ಸ್ವತಃ ನಾನೇ ಹೇಳಿದ್ದುಂಟು. ನಾನು ಭರವಸೆಯನ್ನು ಮಾತ್ರ ಕಳೆದುಕೊಂಡಿರಲಿಲ್ಲ. ಮೊದಲು ನನ್ನ ತಾಯಿ ಚೇತರಿಸಿಕೊಂಡು ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾದರು.

ನಿಮ್ಮೆಲ್ಲರ ಆಶೀರ್ವಾದ ಮತ್ತು ದೈವ ಬಲದಿಂದ ನಮ್ಮ ಮನೆಯಲ್ಲಿ ಚಮತ್ಕಾರ ನಡೆಯಿತು. ನಮ್ಮ ತಂದೆ ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಾ ಬಂದರು. ನಾನು ನಿಮ್ಮೆಲ್ಲರ ಬಳಿ ಕೇಳಿಕೊಳ್ಳುವುದಿಷ್ಟೇ. ಕೊರೊನಾ ಬಂತು ಎಂದು ಧೃತಿಗೆಡಬೇಡಿ. ತಂದೆ-ತಾಯಿಯರನ್ನು ಕೈಬಿಡಬೇಡಿ ಎಂದು ಫೇಸ್‌ಬುಕ್‌ನಲ್ಲಿ ದುನಿಯಾ ವಿಜಯ್ ಬರೆದುಕೊಂಡಿದ್ದಾರೆ.

janata

RELATED TOPICS:
English summary :Duniya Viji

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ನ್ಯೂಸ್ MORE NEWS...