ರಾಜ್ಯದ ಮಹಿಳೆಯರು ಮತ್ತು ಪೊಲೀಸ್ ಇಲಾಖೆ ಆತ್ಮಗೌರವ ರಕ್ಷಣೆಗೆ ರಮೇಶ್ ಜಾರಕಿಹೊಳಿ ಬಂಧನವಾಗಬೇಕು | ಜನತಾ ನ್ಯೂಸ್

27 May 2021
422
DKShivakumar

ಬೆಂಗಳೂರು : ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯದ ಮಹಿಳೆಯರರ ಹಾಗೂ ಪೊಲೀಸ್ ಅಧಿಕಾರಿಗಳ ಆತ್ಮಗೌರವ ರಕ್ಷಣೆಗೆ ಪೊಲೀಸರು ರಮೇಶ್ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಜೊತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ವಿರುದ್ಧದ ಪ್ರಕರಣವನ್ನು ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ. ಆದರೆ ಇದರಿಂದ ನ್ಯಾಯಸಮ್ಮತ ತೀರ್ಪು ಸಿಗುವ ನಿರೀಕ್ಷೆ ಇಲ್ಲ. ಇದರಿಂದಾಗಿ ಕೂಡಲೇ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದ ಸಮಿತಿಗೆ ವಹಿಸಬೇಕು. ಇದರಿಂದ ಮಾತ್ರ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯ ಎಂದರು.

ನಮಗೆ ವ್ಯಕ್ತಿಗಿಂತ ಕರ್ನಾಟಕ ರಾಜ್ಯದ ಪೋಲೀಸ್ ಇಲಾಖೆ ಗೌರವ ಮುಖ್ಯ. ಪೊಲೀಸ್ ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲಾಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಐಪಿಸಿ ಸೆಕ್ಷನ್ 376 ಅಡಿಯ ಆರೋಪಿಯನ್ನು ಸ್ವತಂತ್ರವಾಗಿ ತಿರುಗಾಡಿಕೊಂಡಿರಲು ಬಿಟ್ಟಿದ್ದಾರೆ.

ಆರೋಪಿಯನ್ನು ರಕ್ಷಿಸುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಹಾಗೂ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಟ್ಟ ಸಂಪ್ರದಾಯಕ್ಕೆ ಬುನಾದಿ ಹಾಕಿಕೊಡುತ್ತಿದ್ದಾರೆ. ಕೆಟ್ಟ ಇತಿಹಾಸ ನಿಮ್ಮಿಂದ ನಿರ್ಮಾಣವಾಗುತ್ತದೆ ಎಂದರು.

ಗೃಹಸಚಿವ ಬೊಮ್ಮಾಯಿ ಅವರು ಏನು ಹೇಳಿದ್ದರು? ಆ ಸಂತ್ರಸ್ತ ಯುವತಿ ದೂರು ಕೊಟ್ಟರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಹೇಳಿದ್ದರು. ಆಕೆ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದು, ಲಿಖಿತ ದೂರನ್ನೂ ನೀಡಿದ್ದಾಳೆ. ಕಣ್ಣೀರು ಹಾಕಿದ್ದಾಳೆ.

ಈ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸುವುದು ಪೊಲೀಸರ ಮೊದಲ ಕರ್ತವ್ಯ. ಸಿಡಿ ಯಾರ ಬಳಿ ಇತ್ತು, ಯಾರು ಕರೆ ಮಾಡಿದ್ದರು, ಎಷ್ಟು ಹುಡುಗಿಯರಿಗೆ ಕರೆ ಮಾಡಿದ್ದರು ಎಂಬುದೆಲ್ಲವೂ ಬಹಿರಂಗವಾಗಬೇಕು. ಅದನ್ನು ಬಿಟ್ಟು ಪೊಲೀಸರು ಇನ್ಯಾರನ್ನೋ ಹುಡುಕಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೊರೊನಾ ಬಂದು ಆಸ್ಪತ್ರೆಯಲ್ಲಿ ಮಲಗಿದ್ದರು. ಎಲ್ಲಾ ಸೋಂಕಿತರು ಪಿಪಿಇ ಕಿಟ್ ಹಾಕ್ತರೇನ್ರೀ? ನಾನು ಆಸ್ಪತ್ರೆಯಲ್ಲಿದ್ದೆ, ಸಿದ್ದರಾಮಯ್ಯ ಆಸ್ಪತ್ರೆಯಲ್ಲಿದ್ರು. ನಾವು ಪಿಪಿಇ ಕಿಟ್ ಹಾಕಿಲ್ಲ. ಎಲ್ಲಿ ಕೊರೊನಾ ಬಂತು ದಾಖಲೆ ತೋರಿಸಲಿ. ಆ ಯುವತಿ ನಮ್ಮ‌ ಬಳಿ ನ್ಯಾಯ ಕೇಳೋದು ತಪ್ಪಾ? ಸಿದ್ದರಾಮಯ್ಯ, ರಮೇಶ್ ಕುಮಾರ್, ನನ್ನ ಹೆಸರನ್ನು ಆ ಯುವತಿ ಹೇಳಿದ್ದಳು.

ಒಂದು ರಾಜಕೀಯ ಪಕ್ಷವಾಗಿ ಸಹಾಯ ಮಾಡುತ್ತೇವೆ. ನಮ್ಮ ವಕೀಲರು ಪೋಷಕರನ್ನ ಭೇಟಿ ಮಾಡಲು ತಡೆ ಹಾಕುತ್ತಾರೆ. ಆ ಯುವತಿ ಧೈರ್ಯದಿಂದ ಮುಂದೆ ಬಂದು ಹೇಳಿದ್ದಳು. ಇನ್ನು ಎಷ್ಟು ಸಿಡಿ ಇವೆಯೋ ನನಗೆ ಗೊತ್ತಿಲ್ಲ ಎಂದರು.ಕಳೆದ ಚುನಾವಣೆಯಲ್ಲಿ ಒಂದು ಸಿಡಿ ಬಂದಿತ್ತು. ಪೊಲೀಸ್ ಅಧಿಕಾರಿ ಅನುಚೇತ್ ಏನ್ ಮಾಡಿದ್ದೀರಾ ನೀವು? ಒಬ್ಬ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯ‌ ನಿರ್ವಹಿಸಿ.

ಬೇರೆ ಪ್ರಕರಣಗಳಿಗೆ ಈ ಪ್ರಕರಣ ಎಕ್ಸಾಂಪಲ್ ಸೆಟ್ ಮಾಡುತ್ತಿದ್ದೀರಾ. ಯುವತಿ ಹಾಗು ಪೋಷಕರ ಬೆಂಬಲಕ್ಕೆ ನಾವು ನಿಲ್ಲುತ್ತೇವೆ. ಕೂಡಲೇ ರೇಪಿಸ್ಟ್ ರಮೇಶ್ ನನ್ನ ಬಂಧಿಸಬೇಕು. ನಿನ್ನ ಕ್ಯಾರೆಕ್ಟರ್ ಬಗ್ಗೆ ಮಾತಾಡು. ಆ ಯುವತಿ ಕ್ಯಾರಕ್ಟರ್ ಬಗ್ಗೆ ನೀನು ಮಾತಾಡ್ತೀಯಾ ಎಂದು ರಮೇಶ್ ಜಾರಕಿಹೊಳಿ ಅವರನ್ನು ಏಕವಚನದಲ್ಲೇ ಡಿಕೆಶಿ ಜರಿದರು.

ಈ ಪ್ರಕರಣ ಸಮ್ಮತಿಯಿಂದ ನಡೆದಿದೆಯೋ, ಬಲವಂತದಿಂದ ನಡೆದಿದಿಯೋ ಎಂದು ತೀರ್ಮಾನ ಮಾಡುವುದು ಪೊಲೀಸ್ ಅಧಿಕಾರಿಗಳಲ್ಲ. ಇದನ್ನು ಮಾಡಲು ಸಾಧ್ಯವಿಲ್ಲ ಮುಖರ್ಜಿ ಅವರೇ. ನಿಮ್ಮ ಸ್ಥಾನದ ಗೌರವಕ್ಕೆ ನೀವು ಮಸಿ ಬಳಿದುಕೊಳ್ಳಬೇಡಿ. ವಿಚಾರಣೆ ನಡೆದ ನಂತರ ಕೋರ್ಟ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ನೀವು ಬೇರೆಯವರಿಗೆ ಮಾದರಿ ಆಗಬೇಕು.

ಮಾಜಿ ಸಚಿವರ ಮೇಲೆ ರೇಪ್ ಆರೋಪ ಕೇಳಿ ಬಂದ ನಂತರ ಗೃಹ ಸಚಿವರನ್ನು ಅವರು ಭೇಟಿ ಮಾಡುತ್ತಾರೆ. ಇದನ್ನು ಮಾಧ್ಯಮಗಳು ವರದಿ ಮಾಡಿವೆ. ಸಂಬಂಧಪಟ್ಟವರು ಇದನ್ನು ನಿರಾಕರಿಸಿಲ್ಲ. ರೇಪ್ ಆರೋಪಿಯ ಫೋನ್ ಕರೆಗಳ ದಾಖಲೆ ತೆಗೆಯಿರಿ. ಈ ರೀತಿ ಇನ್ನು ಎಷ್ಟು ಹೆಣ್ಣುಮಕ್ಕಳು ಇಂತಹ ಪರಿಸ್ಥಿತಿ ಎದುರಿಸಿದ್ದಾರೋ? ಈ ಪ್ರಕರಣ ಹೈಕೋರ್ಟ್ ನಿರ್ದೇಶನದಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

RELATED TOPICS:
English summary :DKShivakumar

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್
ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್

ನ್ಯೂಸ್ MORE NEWS...