ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರವಿಲ್ಲ, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಮೂರು ಪಕ್ಷಗಳ ಹೊಂದಾಣಿಕೆ ಸರಕಾರವಾಗಿದೆ! | ಜನತಾ ನ್ಯೂಸ್

27 May 2021
424
Yogeshwar

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎನ್ನಲಾದ ಸಚಿವ ಸಿ.ಪಿ.ಯೋಗೇಶ್ವರ್ ಅವರು ಇದೇ ವಿಷಯವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರು ಪ್ರಸ್ತಾಪಿಸದೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ನನ್ನ ಸಚಿವಗಿರಿಯನ್ನು ನನ್ನ ಮಗ ಚಲಾಯಿಸಿದರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವರು ಮೂಗು ತೂರಿಸೋದು ಇಷ್ಟವಿಲ್ಲ. ಆದರೆ, ರಾಜ್ಯದಲ್ಲಿ ಇದೇ‌ ನಡೆಯುತ್ತಿರುವುದು. ಇದನ್ನು ನಾನು ಸೂಕ್ಷ್ಮವಾಗಿ ಹೇಳಿದ್ದೀನಿ, ಅರ್ಥ ಮಾಡಿಕೊಳ್ಳಿ ಎನ್ನುವ ಮೂಲಕ ಬಿಎಸ್​ವೈ ಸರ್ಕಾರದಲ್ಲಿ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪರೋಕ್ಷವಾಗಿ ಯೋಗೇಶ್ವರ್ ಆಕ್ಷೇಪಿಸಿದರು.

ನಾನು ದೆಹಲಿಗೆ ಹೋಗ್ತೀನಿ, ಬರ್ತೀನಿ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಕ್ಕಾಗಲ್ಲ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತೆ. ಮುಖ್ಯಮಂತ್ರಿ ಬದಲಾವಣೆ ನನ್ನ ಮೂಲ ಉದ್ದೇಶ ಅಲ್ಲ. ಅಷ್ಟೊಂದು ಶಕ್ತಿ ನನಗೆ ಇಲ್ಲ. ಆ ಅಭಿಪ್ರಾಯವೂ ನನಗಿಲ್ಲ. ದೆಹಲಿಗೆ ನಾನು ಭೇಟಿ ಕೊಟ್ಟ ವಿಷಯ ಏಕೆ ಇಷ್ಟೊಂದು ಸುದ್ದಿಯಾಯಿತೋ ಗೊತ್ತಿಲ್ಲ ಎಂದ ಯೋಗೇಶ್ವರ್​, ಅರವಿಂದ ಬೆಲ್ಲದ ಅವರು ದೆಹಲಿಗೆ ಏಕೆ ಹೋಗಿದ್ದರೋ ನನಗೆ ಗೊತ್ತಿಲ್ಲ. ನನ್ನ ವಿಚಾರವನ್ನ ಎಲ್ಲೆಲ್ಲಿ ಹೇಳಬೇಕೋ ಅಲ್ಲಿ ಹೇಳ್ತೀನಿ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ಮಾಧ್ಯಮದ ಮುಂದೆ ಕೆಲವು ವಿಚಾರ ಹೇಳಲು ಆಗಲ್ಲ ಎಂದರು.

ಬಿಜೆಪಿ ಸರಕಾರ ಇಂದು ನಮ್ಮ ಸರಕಾರವಾಗಿ ಉಳಿದಿಲ್ಲ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಮೂರು ಪಕ್ಷಗಳ ಹೊಂದಾಣಿಕೆ ಸರಕಾರವಾಗಿದೆ. ನನ್ನ ಸಚಿವ ಸ್ಥಾನದ ಅಧಿಕಾರವನ್ನು ನನ್ನ ಪುತ್ರ ಚಲಾಯಿಸಲು ಸಾಧ್ಯವಿಲ್ಲ. ನನ್ನ ಇಲಾಖೆಯಲ್ಲಿ ಮತ್ತೊಬ್ಬರ ಹಸ್ತಕ್ಷೇಪವನ್ನು ನಾನು ಸಹಿಸುವುದಿಲ್ಲ ಎಂದು ಪರೋಕ್ಷವಾಗಿ ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

2023ರ ಚುನಾವಣೆಗೆ ನಾನು ಮತ್ತೆ ಚನ್ನಪಟ್ಟಣ ವಿಧಾನ ಪರಿಷತ್ ಕ್ಷೇತ್ರದಿಂದ ಗೆದ್ದು ಬರಬೇಕು. ಇದಕ್ಕೆ ತಕ್ಕ ವಾತಾವರಣವನ್ನು ಪಕ್ಷ ಹಾಗೂ ಸರ್ಕಾರದಲ್ಲಿ ಮೂಡಿಸಬೇಕು. ಪಕ್ಷದ ಚೌಕಟ್ಟಿನಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳ ಗಮನಕ್ಕೂ ಸಹ ತಂದಿದ್ದೇನೆ ಎಂದು ಹೇಳಿದ್ದಾರೆ.

RELATED TOPICS:
English summary :Yogeshwar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...