Wed,Apr24,2024
ಕನ್ನಡ / English

ಗೃಹ ಸಚಿವರನ್ನು ಅತ್ಯಾಚಾರ ಆರೋಪಿ ಭೇಟಿ ಮಾಡಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು: ಸಿದ್ದರಾಮಯ್ಯ | ಜನತಾ ನ್ಯೂಸ್

27 May 2021
1566

ಬೆಂಗಳೂರು : ರಮೇಶ್ ಜಾರಕಿಹೊಳಿ ಅವರಿಗೆ ಸರ್ಕಾರ ಸಂಪೂರ್ಣ ರಕ್ಷಣೆ ಕೊಡುತ್ತಿದೆ. ಎಸ್‍ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿಯನ್ನ ರಜೆ ಮೇಲೆ ಕಳುಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿ, ಚರ್ಚೆ ನಡೆಸಿರುವ ಗೃಹ ಸಚಿವ ಬೊಮ್ಮಾಯಿ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದು, ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರಿಗೆ ಯಾರೆಲ್ಲಾ ಮಂತ್ರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ರಕ್ಷಣೆ ನೀಡುತ್ತಿದ್ದಾರೆ ಅವರೆಲ್ಲರ ಹೆಸರುಗಳನ್ನು ತನಿಖೆಯ ಮೂಲಕ ಬಹಿರಂಗಪಡಿಸಬೇಕು ಮತ್ತು ಅಂಥವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ಸಿಎಂ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣ ದಾಖಲಾಗಿ, ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ ಎದುರು ರಮೇಶ್ ಜಾರಕಿಹೊಳಿ ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಹೇಳಿಕೆ ನೀಡಿದ ಮೇಲೆಯೂ ಜಾರಕಿಹೊಳಿಯನ್ನು ಪೊಲೀಸರು ಏಕೆ ಬಂಧಿಸಿಲ್ಲ? ಅತ್ಯಾಚಾರ ಆರೋಪಿಯೊಬ್ಬ ಸ್ವಚ್ಛಂದವಾಗಿ ಓಡಾಡಿಕೊಂಡಿರಲು ರಾಜ್ಯ ಸರ್ಕಾರದ ಕೃಪಾಕಟಾಕ್ಷ ಕಾರಣವಲ್ಲದೆ ಇನ್ನೇನು? ಅತ್ಯಾಚಾರ ಆರೋಪಿಯಾದ ರಮೇಶ್ ಜಾರಕಿಹೊಳಿ ಕಳೆದ ಶನಿವಾರ ರಾಜ್ಯದ ಗೃಹ ಸಚಿವರನ್ನು ಭೇಟಿಮಾಡಿ, ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿಯೊಬ್ಬ ಗೃಹ ಸಚಿವರನ್ನು ಭೇಟಿಮಾಡಿ, ಮಾತುಕತೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು ಎಂದು ಅವರು ಟೀಕಿಸಿದ್ದಾರೆ.

ನನಗೆ ಇರುವ ಮಾಹಿತಿ ಪ್ರಕಾರ, ಆರೋಪಿ‌ ಸ್ಥಾನದಲ್ಲಿ ಇರುವ ರಮೇಶ ಜಾರಕಿಹೊಳಿ ಶನಿವಾರ ಗೃಹ ಸಚಿವರನ್ನು ಹುಬ್ಬಳ್ಳಿಯಲ್ಲಿ ಭೇಟಿ‌ ಮಾಡಿ ಪ್ರಕರಣದ ಬಗ್ಗೆ ಚರ್ಚೆ ಮಾಡಿದ್ದಾರೆ. ಪ್ರಲ್ಹಾದ್‌ ಜೋಶಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಒಬ್ಬ ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ಭೇಟಿ ಮಾಡಿರುವುದು ಇದೇ ಮೊದಲು.

ರಮೇಶ ಜಾರಕಿಹೊಳಿ ಅವರನ್ನು ಬಿಪಿ, ಶುಗರ್ ಪರೀಕ್ಷೆ ಮಾಡಿ ಕಳುಹಿಸಿದ್ದಾರೆ. ಇದುವರೆಗೂ ಡಿಎನ್‌ಎ ಟೆಸ್ಟ್ ಮಾಡಿಲ್ಲ. ಕಾನೂನು ಪ್ರಕರಣ ಡಿಎನ್‌ಎ ಪರೀಕ್ಷೆ ಮಾಡಬೇಕಿತ್ತು. ಇಂಥ ಪ್ರಕರಣಗಳಲ್ಲಿ ಆರೋಪಿಯ ಡಿಎನ್‌ಎ ಟೆಸ್ಟ್ ಮಾಡಬೇಕೆಂದು ಈ ಹಿಂದೆ ಸುಪ್ರೀಂ ಕೋರ್ಟ್ ಕೂಡಾ ಹೇಳಿದೆ. ಆದರೆ, ರಮೇಶ ಜಾರಕಿಹೊಳಿಯ ರಕ್ಷಣೆಯನ್ನು ಸರ್ಕಾರ ಮಾಡುತ್ತಿದೆ. ಒಪ್ಪಿಗೆ ಮೇರೆ ಎಲ್ಲ ನಡೆದಿದೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬರಲು ರಮೇಶ ಜಾರಕಿಹೊಳಿ ಕಾರಣವಾಗಿದ್ದಾರೆ. ಹೀಗಾಗಿ, ಅವರನ್ನು ಈವರೆಗೂ ಬಂಧಿಸಿಲ್ಲ ಎಂದು ದೂರಿದರು.

"ಆರಂಭದಲ್ಲಿ ವಿಡಿಯೊ ನಕಲಿ ಎಂದು ರಮೇಶ ಜಾರಕಿಹೊಳಿ ಹೇಳಿದ್ದರು. ಇದೀಗ ವಿಡಿಯೊದಲ್ಲಿ ಇರುವುದು ನಾನೇ ಎಂದು ಹೇಳಿದ್ದಾರೆ. ನಾನು, ನಾನೇ - ಅವಳು, ಅವಳೇ ಎಂದಿದ್ದಾರೆ" ಎಂದು ರಮೇಶ್ ಜಾರಕಿಹೊಳಿ ನಡೆಯನ್ನು ಸಿದ್ದರಾಮಯ್ಯ ಲೇವಡಿ ಮಾಡಿದರು.

RELATED TOPICS:
English summary :Siddaramaiah

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...