Sat,Apr20,2024
ಕನ್ನಡ / English

ಯಾಸ್ ಚಂಡಮಾರುತ ವೈಮಾನಿಕ ಸಮೀಕ್ಷೆ: ಒಡಿಶಾ, ಪಶ್ಚಿಮಬಂಗಾಳ, ಜಾರ್ಖಂಡ್ ಗೆ 1 ಸಾವಿರ ಕೋಟಿ ರೂ. ಪರಿಹಾರ ಘೋಷಣೆ | ಜನತಾ ನ್ಯೂಸ್

28 May 2021
1364

ಕೋಲ್ಕತ್ತಾ : ಯಾಸ್ ಚಂಡಮಾರುತ ಪೀಡಿತ ಒಡಿಶಾ ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಗಾಳದ ಕಲೈಕುಂಡದಲ್ಲಿ ಭೇಟಿಯಾದರು. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದರು. ಆದರೆ, ಮೋದಿಯೊಂದಿಗೆ ನಡೆದ ರಿವ್ಯೂ ಮೀಟ್‌ನಲ್ಲಿ ಭಾಗಿಯಾಗದ ಬ್ಯಾನರ್ಜಿಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಟೀಕಿಸಿದ್ದಾರೆ.

ಯಾಸ್ ಚಂಡಮಾರುತ ಹಿನ್ನಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳದ ಪಶ್ಚಿಮ ಮೆದಿನಿಪುರ ಜಿಲ್ಲೆಯಲ್ಲಿ ಪರಿಶೀಲನಾ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಸಂಭವಿಸಿರುವ ಹಾನಿಯ ಕುರಿತು ವರದಿ ಸಲ್ಲಿಕೆ ಮಾಡಿದ್ದಾರೆ.

ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಹಾನಿಯನ್ನು ಅಂದಾಜು ಮಾಡಲು ಕೇಂದ್ರ ಸರ್ಕಾರದ ಉನ್ನತ ಮಟ್ಟದ ನಿಯೋಗವನ್ನು ಕಳಿಸಲಾಗುವುದು. ಒಡಿಶಾದೊಂದಿಗೆ ಕೇಂದ್ರ ಸರ್ಕಾರ ಇದೆ ಎಂದು ಹೇಳಿದರು.

ಒಡಿಶಾಕ್ಕೆ 500 ಕೋಟಿ ರೂಪಾಯಿ, ಉಳಿದ 500 ಕೋಟಿ ರೂಪಾಯಿಯಲ್ಲಿ ಪಶ್ಚಿಮಬಂಗಾಳ ಮತ್ತು ಜಾರ್ಖಂಡ್ ರಾಜ್ಯಕ್ಕೆ ಹಂಚಲಾಗಿದೆ ಎಂದು ವರದಿ ತಿಳಿಸಿದೆ. ಕೇಂದ್ರ ಸರ್ಕಾರದ ತಂಡ ಹಾನಿ ಪರಿಶೀಲಿಸಿದ ನಂತರ ನೀಡುವ ನಷ್ಟದ ವರದಿ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಯಾಸ್ ಚಂಡಮಾರುತದಿಂದ ಮೃತಪಟ್ಟ ಕುಟುಂಬದ ವ್ಯಕ್ತಿಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಈಗಾಗಲೇ ಸರ್ಕಾರ ಘೋಷಿಸಿದೆ.

RELATED TOPICS:
English summary :Cyclone Yaas: PM Modi announces ₹500 cr package for Odisha

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...