ಯುವತಿ ವಿಚಾರದಲ್ಲಿ ಗಲಾಟೆ, ಹಲ್ಲೆಗೊಳಗಾಗಿ ಯುವಕ ಸಾವು! | ಜನತಾ ನ್ಯೂಸ್

28 May 2021
460
Hasan

ಹಾಸನ : ಯುವತಿ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಹಲ್ಲೆಗೊಳಗಾಗಿದ್ದ ಯುವಕನೋರ್ವ ತಿಂಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ.

ಅಶ್ವಥ್ (28) ಅನುಮಾನಸ್ಪದವಾಗಿ ಕೊನೆಯುಸಿರೆಳೆದಿರೋ ಯುವಕ. ಹಾಸನ ತಾಲ್ಲೂಕಿನ ಎಸ್.ಬಂಡೀಹಳ್ಳಿಯಲ್ಲಿ ಏ.28 ರಂದು ಅಶ್ವಥ್​​ಗೆ ಕಲ್ಲು, ದೊಣ್ಣೆಗಳಿಂದ ಥಳಿಸಲಾಗಿತ್ತು ಎಂದು ಪೋಷಕರು ಆರೋಪ ಮಾಡಿದ್ದಾರೆ. ಇತ್ತೀಚೆಗೆ ಅಶ್ವಥ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ. ತಲೆಯಲ್ಲಿ ರಕ್ತ ಹಪ್ಪುಗಟ್ಟಿ ಆತ ಕೊನೆಯುಸಿರೆಳೆದಿದ್ದಾನೆ ಅಂತ ವೈದ್ಯರು ಹೇಳಿದ್ದಾರೆ.

ಕಳೆದ ತಿಂಗಳ ಏ.28ರಂದು ಯುವತಿಯ ಕಡೆಯುವರು ಹಲ್ಲೆ ನಡೆಸಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿ ಆತ ಕೊನೆಯುಸಿರೆಳೆದಿದ್ದಾನೆ ಎಂಬುದು ಪೋಷಕರು ನೀಡಿದ ದೂರಿನಲ್ಲಿ ತಿಳಿದು ಬಂದಿದೆ.

ಹಾಸನ ತಾಲೂಕಿನ ಎಸ್. ಬಂಡೀಹಳ್ಳಿಯಲ್ಲಿ ಯುವತಿ ವಿಚಾರಕ್ಕೆ ಸಂಬಂಧಪಟ್ಟಂತೆ ಏ. 28 ರಂದು ನಡೆದ ಗಲಾಟೆಯಲ್ಲಿ ಹಾಸನ ತಾಲೂಕಿನ ಗಾಡೇನಹಳ್ಳಿ ಗ್ರಾಮದ ಅಶ್ವತ್ಥ್ ಗಂಭೀರವಾಗಿ ಗಾಯಗೊಂಡಿದ್ದ.ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಈ ಗಲಾಟೆ ನಡೆದಿದ್ದು, ಯುವತಿಯೊಂದಿಗೆ ಯಾವುದೇ ರೀತಿಯ ಸಂಪರ್ಕವನ್ನು ಇಟ್ಟುಕೊಳ್ಳಬಾರದೆಂದು ಹಲವು ಬಾರಿ ಬಂಡೀಹಳ್ಳಿ ಗ್ರಾಮಸ್ಥರು ಅಶ್ವತ್ಥ್​ ಪೋಷಕರನ್ನ ಕರೆದು, ನಿಮ್ಮ ಮಗನಿಗೆ ಬುದ್ದಿ ಹೇಳಿ ಅಂತ ತಿಳಿಸಿದ್ದರು ಎನ್ನಲಾಗಿದೆ.

ಆದರೆ, ಅಶ್ವತ್ಥ್ ಮಾತ್ರ ಸುಮ್ಮನಾಗದೇ ಯುವತಿಯನ್ನು ಪ್ರೀತಿಸುತ್ತಿದ್ದ. ಆಕೆಯನ್ನೇ ಮದುವೆಯಾಗುವುದಾಗಿ ಹೇಳಿದ್ದ. ಗಲಾಟೆಯ ಬಳಿಕ ಪಾನಮತ್ತನಾಗಿ ಬಂಡಿಹಳ್ಳಿ ಗ್ರಾಮಕ್ಕೆ ಗಲಾಟೆ ಮಾಡಿದ ಹಿನ್ನೆಲೆ ಗ್ರಾಮಸ್ಥರು ಅಶ್ವತ್ಥ್‌​ಗೆ ಥಳಿಸಿದ್ದರು.ನಂತರ ರಾಜಿ ಪಂಚಾಯ್ತಿ ಮೂಲಕ ಸಮಸ್ಯೆ ಬಗೆಹರಿದಿತ್ತು.

ಆದರೆ, ಕಳೆದ ಮೂರು ದಿನಗಳ ಹಿಂದೆ ಅಶ್ವತ್ಥ್ ಇದಕ್ಕಿದ್ದಂತೆ ತಲೆಸುತ್ತಿ ಬಿದ್ದಿದ್ದಾನೆ. ಕೂಡಲೇ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ಆತನನ್ನು ದಾಖಲಿಸಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.

ಅಶ್ವಥ್​​​ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿತ್ತು ಅಂತಾ ವೈದ್ಯರು ಹೇಳುತ್ತಿದ್ದಾರೆ. ಹಿಂದೆ ನಡೆದ ಗಲಾಟೆಯಲ್ಲಿ ಏನಾದ್ರು ತಲೆಗೆಪೆಟ್ಟು ಬಿತ್ತೋ ಅಥವಾ ಸ್ವಾಭಾವಿಕವಾಗಿ ಏನಾದ್ರು ಅಶ್ವಥ್ ಮೃತಪಟ್ಟನೋ ಅನ್ನೋದು ಮರಣೋತ್ತರ ಪರೀಕ್ಷೆ ನಂತ್ರ ತಿಳಿಯಬೇಕಿದೆ.

ಈ ಸಂಬಂಧ ಮೃತ ಯುವಕನ ಪೋಷಕರು, ಕೊಲೆ ಆರೋಪದಡಿ ಕೆಲ ಗ್ರಾಮಸ್ಥರ ವಿರುದ್ಧ ಶಾಂತಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಸಿಕೊಂಡಿರುವ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Hasan

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...