ಭೀಮಾ ನದಿಯಲ್ಲಿ ಈಜಲು ಹೋದ ನಾಲ್ಕು ಮಕ್ಕಳು ನೀರು ಪಾಲು | ಜನತಾ ನ್ಯೂಸ್
ವಿಜಯಪುರ : ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನ ರಭಸದ ಹರಿವಿಗೆ ಸಿಕ್ಕು ಕೊಚ್ಚಿಹೋಗಿದ್ದು, ಶವಗಳಿಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ.
ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ ಅವರ ಮಕ್ಕಳಾದ ಆರತಿ(13), ವಿಠ್ಠಲ(10) ಹಾಗೂ ಶಿವಾಜಿ ತಾನವಡೆ ಎಂಬುವವರ ಮಕ್ಕಳಾದ ಸಮೀಕ್ಷಾ(14), ಅರ್ಪಿತಾ(13) ನೀರುಪಾಲಾಗಿದ್ದಾರೆ.
ಆರತಿ ಶವ ಮಾತ್ರ ಸಿಕ್ಕಿದ್ದು, ಉಳಿದ ಮೂವರಿಗಾಗಿ ಶೋಧ ಮುಂದುವರೆದಿದೆ. ಮಹಾರಾಷ್ಟ್ರದ ಮಂದ್ರೂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Vijaypura