Fri,Apr26,2024
ಕನ್ನಡ / English

ಮಗನ ಔಷಧಿಗೆ ಮೂರು ದಿನಗಳ ಕಾಲ 280 ಕಿಲೋಮೀಟರ್ ಸೈಕಲ್ ತುಳಿದ ಅಪ್ಪ! | ಜನತಾ ನ್ಯೂಸ್

31 May 2021
1651

ಮೈಸೂರು : ಲಾಕ್​ಡೌನ್​ನಿಂದ ಮಗನಿಗೆ ಔಷಧಿ ತರಲು ಪರಿಪಾಡಲು ಪಟ್ಟ ತಂದೆಯೊಬ್ಬರು ಬರೋಬ್ಬರು 280 ಕಿ.ಮೀ ಸೈಕಲ್​ ತುಳಿದು ಮಾತ್ರೆ ತಂದಿರುವ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ಆನಂದ್​ ಮನಗ ಚಿಕಿತ್ಸೆಗಾಗಿ ಸತತ ಮೂರು ದಿನಗಳ ಕಾಲ ಸೈಕಲ್​ ತುಳಿದಿದ್ದಾರೆ.

ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್​ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ.

ಆಟೋ, ವ್ಯಾನ್​ ಸೇರಿದಂತೆ ಇತರೆ ವಾಹನಗಳನ್ನು ಬಾಡಿಗೆಗೆ ಕೇಳಿ ನೋಡಿದ್ದಾರೆ. ಆದರೆ, ಯಾವುದೇ, ವಾಹನಗಳು ಬಾಡಿಗೆಗೆ ಸಿಕಿಲ್ಲ. ಅಲ್ಲದೇ, ತಮ್ಮ ಪರಿಚಯಸ್ಥರಲ್ಲಿ ಕೂಡ ಬೈಕ್​ ನೀಡುವಂತೆ ಸಹಾಯ ಕೋರಿದರು. ಲಾಕ್​ಡೌನ್​ ಭೀತಿ ಬೈಕ್​ ಸೀಜ್​ ಆದರೆ, ಎಂದು ಅವರ ಸ್ನೇಹಿತರು ಹಿಂದೆ ಮುಂದೆ ನೋಡಿದ್ದಾರೆ.

ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್​ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.

ಆನಂದ್ ಪ್ರತಿ ಬಾರಿಯೂ ತಪ್ಪಿಲ್ಲದೆ ಮಾತ್ರೆಗಳನ್ನು ತಂದುಕೊಡುತ್ತಿದ್ದರು. ಆದರೆ ಈ ಬಾರಿ ಮಗನಿಗೆ ಔಷಧಿ ತರಲು ಲಾಕ್ ಡೌನ್ ಅಡ್ಡಿಯಾಗಿತ್ತು. ಮೈಸೂರಿನಿಂದ ಬೆಂಗಳೂರಿಗೆ ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆಯಲ್ಲಿ ಸತತ ಮೂರು ದಿನಗಳ ಕಾಲ ಆನಂದ್ ಸೈಕಲ್ ತುಳಿದಿದ್ದಾರೆ.

ತನ್ನ ಸೈಕಲ್ ಏರಿ ಹೊರಟ ಆನಂದ್ ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ಪಡೆದಿದ್ದಾರೆ.

janata

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...