ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ವಾರ್ಡ್ ಬಾಯ್ ಬಂಧನ | ಜನತಾ ನ್ಯೂಸ್
ಹುಬ್ಬಳ್ಳಿ : ಸೋಂಕಿತ ಮಹಿಳೆಯ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ವಾರ್ಡ್ ಬಾಯ್ ಅಶೋಕ್ ಹಲಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಅಶೋಕ್ ಹಲಗಿ ಎಂದು ಗುರುತಿಸಲಾಗಿದೆ. ಕಳೆದ 23ರಂದು ಹುಬ್ಬಳ್ಳಿಯ ಪ್ರತಿಷ್ಠಿತ ಬಾಲಾಜಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್ ಸೊಂಕಿತ ಮಹಿಳೆಯ ಮೇಲೆ ವಾರ್ಡಬಾಯ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಸೋಂಕಿತ ಮಹಿಳೆ ಪುತ್ರನಿಗೆ ಈ ಕುರಿತು ಮಾಹಿತಿ ನೀಡಿದ್ದಳು.
ಸೋಂಕಿತೆಯ ಆರೋಪದಿಂದ ಆಕೆಯ ಪುತ್ರ ದೂರನ್ನು ದಾಖಲಿಸಿದ್ದರು. ಆರೋಪ ಕೇಳಿಬರುತ್ತಿದ್ದಂತೆ ವಾರ್ಡ್ ಬಾಯ್ ಪರಾರಿಯಾಗಿದ್ದ.
ತನಿಖೆ ನಡೆಸಿದ ವಿದ್ಯಾನಗರ ಪೋಲೀಸರು ಸೊಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಾರ್ಡ್ ಬಾಯ್ ಅಶೋಕ ಹಲಗಿಯನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.